ST Somashekar: ‘ಗರಡಿ’ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ ಸಹಕಾರ ಸಚಿವರು
ಸಚಿವ ಬಿ.ಸಿ ಪಾಟೀಲ್ (BC Patil) ಅವರ ನಿರ್ಮಾಣದಲ್ಲಿ ತಯಾರಾಗುತ್ತಿರುವ ‘ಗರಡಿ’ (Garadi) ಚಿತ್ರದಲ್ಲಿ ಗೆಳೆಯನಿಗಾಗಿ ಬಣ್ಣ ಹಚ್ಚಿರುವುದಾಗಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗರಡಿ’ ಸಿನಿಮಾದ ಮೂಲಕ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಸಚಿವ ಬಿ.ಸಿ ಪಾಟೀಲ್ (BC Patil) ಅವರ ನಿರ್ಮಾಣದಲ್ಲಿ ತಯಾರಾಗುತ್ತಿರುವ ‘ಗರಡಿ’ (Garadi) ಚಿತ್ರದಲ್ಲಿ ಗೆಳೆಯನಿಗಾಗಿ ಬಣ್ಣ ಹಚ್ಚಿರುವುದಾಗಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ (ST Somashekhar), “ನನಗೆ ನಟನೆಯ ಗಂಧ, ಗಾಳಿ ಗೊತ್ತಿಲ್ಲ. ಗೆಳೆಯ ಪಾಟೀಲರು ಅವರ ಸಿನಿಮಾದಲ್ಲಿ ನಟಿಸುವಂತೆ ಕೇಳಿದರು. ಗೆಳೆಯನ ಪ್ರೀತಿಗಾಗಿ ಬಣ್ಣ ಹಚ್ಚಿದೆ. ನಾನು ಪಾತ್ರ ಮಾಡುತ್ತಿರುವುದರಿಂದ ಬೇರೊಬ್ಬ ನಟನ ಅವಕಾಶ ಕಸಿದುಕೊಂಡೆ ಅನಿಸುತ್ತಿದೆ” ಎಂದಿದ್ದಾರೆ.
ಇದನ್ನೂ ಓದಿ- ಧರೆಗಿಳಿದ ಸಿನಿಮಾ ಸ್ವರ್ಗಲೋಕ..! ಎಲ್ಲೆಲ್ಲೂ ಕಾಣುತ್ತಿದ್ದಾರೆ ಡಾ. ಪುನೀತ್ ರಾಜ್‌ಕುಮಾರ್..!
ಬೆಳಗ್ಗೆ ನಿರ್ದೇಶಕ ಯೋಗರಾಜ್ ಭಟ್ಟರು (Yograj Bhat) ನನ್ನ ಪಾತ್ರವನ್ನು ವಿವರಿಸಿ, ಡೈಲಾಗ್ ಹೇಳಿ ಕೊಟ್ಟರು. ಅವರು ಏನು ಹೇಳಿದರೋ ಅಷ್ಟನ್ನು ಮಾಡಿದ್ದೇನೆ. ಅದರಾಚೆ ನನಗೆ ನಟನೆ ಬಾರದು. ಪ್ರೇಕ್ಷಕರು ನನ್ನ ಪಾತ್ರವನ್ನು ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ ಎನ್ನುವುದು ಸೋಮಶೇಖರ್ ಮಾತು.
'ಗರಡಿ' ಸಿನಿಮಾದಲ್ಲಿ ನಟ, ಸಚಿವ ಬಿ.ಸಿ. ಪಾಟೀಲ್, ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ.
ಈ ಸಿನಿಮಾದಲ್ಲಿ ಸಚಿವ ಎಸ್.ಟಿ ಸೋಮಶೇಖರ್ ಅವರು, ಸೋಮಣ್ಣ ಎನ್ನುವ ಪಾತ್ರ ನಿರ್ವಹಿಸುತ್ತಿದ್ದಾರೆ. ಅದು ಬಿ.ಸಿ. ಪಾಟೀಲ್ ಅವರ ಗೆಳೆಯನ ಪಾತ್ರವೇ ಎನ್ನುವುದು ವಿಶೇಷ.
ಬೆಂಗಳೂರಿನ ಜಿ.ವಿ ಅಯ್ಯರ್ ಸ್ಟುಡಿಯೋದಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ಪಾಟೀಲ್, ಸೋಮಶೇಖರ್, ಚಿತ್ರದ ನಾಯಕ ಯಶಸ್ ಸೂರ್ಯ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದರು.
ಇದನ್ನೂ ಓದಿ- ʼದಿ ಕಾಶ್ಮೀರ್ ಫೈಲ್ಸ್ʼಗೆ ಮೋದಿ ಮೆಚ್ಚುಗೆ... ಪ್ರಚಾರವಿಲ್ಲದೆ ಫುಲ್ ಸೌಂಡ್!
ಅಂದಹಾಗೆ ಗಾಳಿಪಟ 2 ಸಿನಿಮಾದ ನಂತರ ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಹಳ್ಳಿ ಸೊಗಡಿನಲ್ಲಿ ಕಥೆಯನ್ನು ಹೇಳಲು ಹೊರಟಿದ್ದಾರಂತೆ ನಿರ್ದೇಶಕರು. ಇಂತಹ ಕಥೆಯನ್ನು ಅವರು ಇದೇ ಮೊದಲ ಬಾರಿಗೆ ಆಯ್ಕೆ ಮಾಡಿಕೊಂಡಿದ್ದಾರಂತೆ ಯೋಗರಾಜ್ ಭಟ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.