ಮಾಜಿ ಸಿಎಂ ಬಿಎಸ್‌ವೈ ನಂತರ "ತನುಜಾ" ಸಿನಿಮಾ ಅಖಾಡಕ್ಕೆ ಸಚಿವ ಸುಧಾಕರ್ ಎಂಟ್ರಿ!

Written by - YASHODHA POOJARI | Last Updated : Apr 7, 2022, 03:56 PM IST
  • ಸಿನಿರಂಗಕ್ಕೆ ಕಾಲಿಟ್ಟ ಸಚಿವ ಡಾ. ಕೆ.ಸುಧಾಕರ್
  • ಮಾಜಿ ಸಿಎಂ ಬಿಎಸ್‌ವೈ ನಂತರ "ತನುಜಾ" ಸಿನಿಮಾದಲ್ಲಿ ಸುಧಾಕರ್‌ ನಟನೆ
  • ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ. ಹಳ್ಳಿಯವರ ನಿರ್ದೇಶನ
ಮಾಜಿ ಸಿಎಂ ಬಿಎಸ್‌ವೈ ನಂತರ "ತನುಜಾ" ಸಿನಿಮಾ ಅಖಾಡಕ್ಕೆ ಸಚಿವ ಸುಧಾಕರ್ ಎಂಟ್ರಿ! title=
Thanuja Cinema

ನೈಜ ಘಟನೆಯಾಧಾರಿತ ತನುಜಾ ಸಿನಿಮಾದ ಕಥೆಗೆ ಮನಸೋತು ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಸಚಿವ ಡಾ. ಕೆ.ಸುಧಾಕರ್ ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್‌ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ.

ಈ ಹಿಂದೆ ತನುಜಾ ಎನ್ನುವ ಹೆಣ್ಣು ಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ , ಸಚಿವ  ಡಾ. ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು. ಅಷ್ಟೇ ಅಲ್ಲದೆ ಆ ನೈಜ ಘಟನೆಯಾಧಾರಿತ ವರದಿ ಆಧರಿಸಿ  ಸಿನಿಮಾ ಕೂಡ ಸೆಟ್ಟೇರಿದ್ದು, ಆ ಸಿನಿಮಾಗೆ ತನುಜಾ ಎಂದು ನಾಮಕರಣ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ  ತಮ್ಮ ಪಾತ್ರಕ್ಕೆ ತಾವೇ  ನಟಿಸಿ ಸೈ ಎನಿಸಿಕೊಂಡಿದ್ದರು. 

ಇದನ್ನು ಓದಿ: HD Kumaraswamy : ಮುಸ್ಲಿಂರ ವಿಗ್ರಹ ವಿರೋಧ ಅಭಿಯಾನಕ್ಕೆ ಆಕ್ರೋಶ ವ್ಯಕ್ತಪಡಿಸಿದ ಎಚ್​ಡಿಕೆ!

ಇದೀಗ ಸಚಿವರಾದ ಡಾ. ಕೆ.ಸುಧಾಕರ್ ಅವರು ಕೂಡ ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ  ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ. ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದು ವಿಶೇಷವಾಗಿದ್ದು, ಒಂದೇ ಟೇಕ್‌ಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ.

ಇನ್ನು ಈ ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ. ಹಳ್ಳಿಯವರ ನಿರ್ದೇಶನವಿದ್ದು, Beyond Visions Cinemas ಬಂಡವಾಳ ಹೂಡಿದೆ. ಈ ಚಿತ್ರವು ಶಿವಮೊಗ್ಗ ಸುತ್ತಮುತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.

ಇದನ್ನು ಓದಿ: K Sudhakar : ನಾನೊಬ್ಬ ಸೆಕ್ಯುಲರ್ ರಾಜಕಾರಣಿ : ಸಚಿವ ಸುಧಾಕರ್

ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್,  ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಅಭಿನಯಿಸಿದ್ದು, ಪ್ರದ್ಯೋತನ ಸಂಗೀತ ನಿರ್ದೇಶನ, ರವೀಂದ್ರನಾಥ್ ಹಾಗೂ ಮೋಹನ್ ಎಲ್. ರಂಗಕಹಳೆ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ. ಸಂಕಲನವಿದ್ದು, ಆರ್.ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ.ಪ್ರಹ್ಲಾದ್ ಸಂಭಾಷಣೆ, ರಘುನಂದನ್ ಎಸ್.ಕೆ. ಕಾರ್ಯಕಾರಿ ನಿರ್ಮಾಪಕ, ಸತೀಶ್ ಬ್ರಮ್ಮಾವರ್ ನಿರ್ಮಾಣ ನಿರ್ವಹಣೆ ಇದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News