`Adipurush` ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದ ಅನುರಾಗ್ ಠಾಕೂರ್
Adipurush Controversy: `ಆಧಿಪುರುಷ್` ಚಿತ್ರದ ಸಂಭಾಷಣೆ ವಿವಾದ ನಿಲ್ಲುವ ಮಾತೆ ಎತ್ತುತ್ತಿಲ್ಲ. ಹೀಗಿರುವಾಗ ಇದೀಗ ಸರ್ಕಾರ ಕೂಡ ಈ ಕುರಿತು ಕಠಿಣ ನಿಲುವು ತಳೆದಿದ್ದು, ಯಾರೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಲು ಬಿಡುವುದಿಲ್ಲ ಎಂದು ಹೇಳಿದೆ.
Government On Adipurush Controversy: ಓಂ ರಾವುತ್ ನಿರ್ದೇಶನದ 'ಆದಿಪುರುಷ' ಚಿತ್ರದ ಸಂಭಾಷಣೆಯ ಮೇಲೆ ಹುಟ್ಟಿಕೊಂಡ ವಿವಾದ ಹೆಚ್ಚಾಗುತ್ತಲೇ ಇದೆ. ಪ್ರಭಾಸ್ ಅಭಿನಯದ ಚಿತ್ರದಲ್ಲಿ ರಾಮಾಯಣದ ಚಿತ್ರಣ ಮತ್ತು ವಿಶೇಷವಾಗಿ ಅದರ ಸಂಭಾಷಣೆಯು ಬಹಳಷ್ಟು ನಕಾರಾತ್ಮಕ ವಿಮರ್ಶೆಗಳಿಗೆ ಕಾರಣವಾಗಿದೆ. ಚಿತ್ರದಲ್ಲಿ ರಾಮಾಯಣದ ಪಾತ್ರಗಳಿಗೆ ಅಗೌರವ ತೋರಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹೇಳಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಇದೀಗ ಸರ್ಕಾರ ಕೂಡ ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
‘ಆದಿಪುರುಷ’ ವಿಚಾರದಲ್ಲಿ ಸರ್ಕಾರದ ಕಟ್ಟುನಿಟ್ಟಿನ ಧೋರಣೆ
'ಆದಿಪುರುಷ' ಚಿತ್ರ ವಿವಾದದ ಮಧ್ಯೆ, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಕ್ಕು ಯಾರಿಗೂ ನೀಡಲಾಗುವುದಿಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಈ ಬಗ್ಗೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಧರಿಸಬೇಕಿದೆ. ಚಿತ್ರದ ಸಂಭಾಷಣೆಗಳನ್ನು ಬದಲಾಯಿಸಲು ನಿರ್ಮಾಪಕರು ಸಿದ್ಧರಾಗಿದ್ದಾರೆ ಎಂಬ ವರದಿಗಳು ನನಗೆ ಬಂದಿವೆ ಎಂದು ಅವರು ಹೇಳಿದ್ದಾರೆ. ತಾವು ಅದರ ಮೇಲ್ವಿಚಾರಣೆ ನೋಡಿಕೊಳ್ಳುವುದಾಗಿ ಅನುರಾಗ್ ಠಾಕೂರ್ ಹೇಳಿದ್ದಾರೆ. ಕನಿಷ್ಠ ತಮ್ಮ ಮೇಲ್ವಿಚಾರಣೆಯಲ್ಲಿಯಾದರೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ-Adipurush Controversy: 'ಕೇವಲ ಸಂಭಾಷಣೆ ಬದಲಾಯಿಸುವುದು ಸಾಕಾಗುವುದಿಲ್ಲ, ಕ್ಷಮೆ ಕೋರಿ'
ಡೈಲಾಗ್ ಬದಲಾಯಿಸುವ ಬಗ್ಗೆ ತಂಡ ಹೇಳಿದ್ದೇನು
ಇನ್ನೊಂದೆಡೆ ಈ ಕುರಿತು ಚಿತ್ರದ ತಂಡವು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, "ಆದಿಪುರುಷ ಚಿತ್ರಕ್ಕೆ ವಿಶ್ವಾದ್ಯಂತ ಉತ್ತಮ ಪ್ರತಿಕ್ರಿಯೆಯನ್ನು ಸಿಗುತ್ತಿದೆ ಮತ್ತು ಚಿತ್ರವು ಎಲ್ಲಾ ವಯೋಮಾನದ ಪ್ರೇಕ್ಷಕರ ಹೃದಯವನ್ನು ಗೆಲ್ಲುತ್ತಿದೆ. ಇನ್ನೊಂದೆಡೆ ಚಿತ್ರ ತಂಡ ಸಾರ್ವಜನಿಕರ ಅಭಿಪ್ರಾಯಕ್ಕೆ ಪ್ರಾಮುಖ್ಯತೆಯನ್ನು ನೀಡುತ್ತದೆ ಮತ್ತು ಆಕ್ಷೇಪಾರ್ಹ ಸಂಭಾಷಣೆಗಳನ್ನು ಬದಲಾಯಿಸಲು ನಿರ್ಧರಿಸಿದೆ" ಎಂದು ಹೇಳಿದೆ.
ಇದನ್ನೂ ಓದಿ-Adipurush ನಿರ್ಮಾಪಕರ ಮಹತ್ವದ ನಿರ್ಧಾರ, ಆಕ್ಷೇಪಾರ್ಹ ಸಂಭಾಷಣೆಗಳನ್ನು ಬದಲಿಸಲಾಗುವುದು
ಆದಿಪುರುಷ್ ಚಿತ್ರ ನಿಷೇಧಕ್ಕೆ ಹೆಚ್ಚಾದ ಬೇಡಿಕೆ
ಓಂ ರಾವುತ್ ನಿರ್ದೇಶನದ ಆದಿಪುರುಷ್' ಚಿತ್ರವು ಜೂನ್ 16 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಸೃಷ್ಟಿಸುತ್ತಿರುವ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡುತ್ತಿದೆ ಆದರೆ ಚಿತ್ರದ ಡೈಲಾಗ್‌ಗಳಿಗೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದು, ದೇಶಾದ್ಯಂತ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ. ಚಿತ್ರಕ್ಕೆ ನಿಷೇಧ ವಿಧಿಸಬೇಕೆಂಬ ಮಾತುಗಳು ಕೂಡ ಕೇಳಿಬರಲಾರಂಭಿಸಿವೆ. 'ಆದಿಪುರುಷ್' ಚಿತ್ರದಲ್ಲಿ ಪ್ರಭಾಸ್ ಶ್ರೀರಾಮನ ಪಾತ್ರದಲ್ಲಿ ನಟಿಸಿದ್ದಾರೆ, ಕೃತಿ ಸನೋನ್ ಮಾತೆ ಸೀತೆಯ ಪಾತ್ರದಲ್ಲಿ ನಟಿಸಿದ್ದರೆ, ಸನ್ನಿ ಸಿಂಗ್ ಲಕ್ಷ್ಮಣ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಲಂಕೇಶ್ ಪಾತ್ರದಲ್ಲಿ ಸೈಫ್ ಅಲಿ ಖಾನ್ ನಟಿಸಿದ್ದಾರೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.