BJP Prasident : ಕೇಂದ್ರ ಮತ್ತು ರಾಜ್ಯಗಳಲ್ಲಿ ರಾಜಕೀಯ ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿವೆ. ಮೋದಿ 3.0 ಆಡಳಿತದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಯಾರಿಗೆ ಹಸ್ತಾಂತರವಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ.   


COMMERCIAL BREAK
SCROLL TO CONTINUE READING

ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದೆ. ಭಾರತೀಯ ಜನತಾ ಪಕ್ಷವು ಅತಿ ಹೆಚ್ಚು ಸಂಸದ ಸ್ಥಾನಗಳನ್ನು ಗೆದ್ದು ಮೈತ್ರಿಯಲ್ಲಿ ಮೊದಲ ದೊಡ್ಡ ಪಕ್ಷವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಗದ್ದುಗೆ ಏರುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಜತೆಗೆ 60ಕ್ಕೂ ಹೆಚ್ಚು ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. 


ಇದನ್ನೂ ಓದಿ: ಮೋದಿ ನೂತನ ಸಂಪುಟಕ್ಕೆ ಅಣ್ಣಾಮಲೈ ಸೇರ್ಪಡೆ..! ಇಂದು ಅಧಿಕಾರ ಸ್ವೀಕಾರ?


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮೋದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ನೂತನ ಅಧ್ಯಕ್ಷರಾಗಿ ಯಾರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮೋದಿ ದೇಶ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.


ಇನ್ನು ನಡ್ಡಾ ಅವರ ಐದು ವರ್ಷಗಳ ಅಧಿಕಾರಾವಧಿಯಲ್ಲಿ, ಆರು ತಿಂಗಳ ಕಾರ್ಯಾಧ್ಯಕ್ಷರು ಸೇರಿದಂತೆ, 29 ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆಗಳು ನಡೆದವು, ಅದರಲ್ಲಿ ಬಿಜೆಪಿ ಏಕಾಂಗಿಯಾಗಿ ಅಥವಾ ಮಿತ್ರಪಕ್ಷಗಳೊಂದಿಗೆ 16 ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿತು, ಅವರಿಗೆ 55% ಸ್ಟ್ರೈಕ್ ರೇಟ್ ನೀಡಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.