ಭಾರೀ ಮೊತ್ತಕ್ಕೆ ಮಾರಾಟವಾಯಿತು "ಮಾಂಕ್ ದಿ ಯಂಗ್" ಚಿತ್ರದ ಹಾಡುಗಳು

ಅಶ್ವಿನ್ ಶಾನ್ ಭಾಗ್ ಬರೆದಿರುವ ಈ ಹಾಡುಗಳನ್ನು ಖ್ಯಾತ ಗಾಯಕರಾದ ಸಾದ್ವಿನಿ ಕೊಪ್ಪ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ.  ನವೆಂಬರ್ 28 ರಂದು ಅದ್ದೂರಿಯಾಗಿ ಆಡಿಯೋ ರಿಲೀಸ್ ಮಾಡುವ ಸಿದ್ದತೆ ನಡೆಯುತ್ತಿದೆ.

Written by - Yashaswini V | Last Updated : Nov 7, 2022, 02:12 PM IST
  • ಇತ್ತೀಚಿಗೆ ಖ್ಯಾತ ನಿರ್ದೇಶಕ - ನಟ ರಿಷಭ್ ಶೆಟ್ಟಿ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದರು.
  • ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.
  • ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ.
ಭಾರೀ ಮೊತ್ತಕ್ಕೆ ಮಾರಾಟವಾಯಿತು "ಮಾಂಕ್ ದಿ ಯಂಗ್" ಚಿತ್ರದ ಹಾಡುಗಳು  title=
Monk The Young

ಬೆಂಗಳೂರು: ಹೊಸ ತಂಡ ಸೇರಿ ನಿರ್ಮಿಸಿರುವ "ಮಾಂಕ್ ದಿ ಯಂಗ್" ಚಿತ್ರದ ಹಾಡುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆ ಈ ಚಿತ್ರದ ಆಡಿಯೋ ಹಕ್ಕನ್ನು  ಖರೀದಿಸಿದೆ. ಸುಪ್ರೀತ್ ಫಾಲ್ಗುಣ ಸಂಗೀತ ನೀಡಿರುವ ಈ ಚಿತ್ರದಲ್ಲಿ ಎರಡು ಸುಮಧುರ ಹಾಡುಗಳಿವೆ.

ಅಶ್ವಿನ್ ಶಾನ್ ಭಾಗ್ ಬರೆದಿರುವ ಈ ಹಾಡುಗಳನ್ನು ಖ್ಯಾತ ಗಾಯಕರಾದ ಸಾದ್ವಿನಿ ಕೊಪ್ಪ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ.  ನವೆಂಬರ್ 28 ರಂದು ಅದ್ದೂರಿಯಾಗಿ ಆಡಿಯೋ ರಿಲೀಸ್ ಮಾಡುವ ಸಿದ್ದತೆ ನಡೆಯುತ್ತಿದೆ.

ಇದನ್ನೂ ಓದಿ- ನ.11ರಂದು ತೆರೆಗೆ ಬರಲಿದೆ “ಹುಬ್ಬಳ್ಳಿ ಡಾಬಾ”: ದ್ವಿಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್

ಇತ್ತೀಚಿಗೆ ಖ್ಯಾತ ನಿರ್ದೇಶಕ - ನಟ ರಿಷಭ್ ಶೆಟ್ಟಿ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದರು. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.  ಸರೋವರ್ ಅವರು  ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. 

ಇದನ್ನೂ ಓದಿ- 'ಸ್ಪೂಕಿ ಕಾಲೇಜಿ'ನಲ್ಲಿರೋ ದೆವ್ವದ ಕಥೆ ನೋಡಲು ನವೆಂಬರ್ 25ಕ್ಕೆ ತನಕ ಕಾಯಿರಿ...!

ನಿವೃತ್ತ ಆರ್ಮಿ ಆಫೀಸರ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಸರೋವರ್, ಗೋಪಿಚಂದ್,  ಲಾಲ್ ಚಂದ್ ಖತಾರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರೆಲ್ಲಾ ಈ ಚಿತ್ರದಲ್ಲಿ ನಟನೆಯನ್ನೂ ಮಾಡಿರುವುದು ವಿಶೇಷ.ಕಾರ್ತಿಕ್ ಶರ್ಮ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹದ ನಿರ್ದೇಶನ ಹಾಗೂ ವಿಜೇತ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News