Monk The young: ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ಈ ವಾರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ ಸ್ಟುಡಿಯೋಸ್ ಅವರು ವಿತರಣೆ ಮಾಡುತ್ತಿದ್ದಾರೆ.
ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಜನರ ಮನ ತಲುಪಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಈವರೆಗೂ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.
ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ನಿವೃತ್ತ ಆರ್ಮಿ ಆಫೀಸರ್ ಕರ್ನಲ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಗೋಪಿಚಂದ್, ಲಾಲ್ ಚಂದ್ ಖತಾರ್ ಮತ್ತು ಸರೋವರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರೆಲ್ಲಾ ಈ ಚಿತ್ರದಲ್ಲಿ ನಟನೆಯನ್ನೂ ಮಾಡಿರುವುದು ವಿಶೇಷ.
ಕಾರ್ತಿಕ್ ಶರ್ಮ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಕ್ಲೈಮಾಕ್ಸ್ ಛಾಯಾಗ್ರಹಣ ದೀಪಕ್ ಹಾಗೂ ಧನುಷ್ ಬೆದ್ರೆ ಅವರ ಸಂಕಲನ ಹರ್ಷವರ್ಧನ್ ಏ ಎಲ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









