Mrunal Thakur On Children : ನಟಿ ಮೃಣಾಲ್ ಠಾಕೂರ್ ಪ್ರಸ್ತುತ ತೆಲುಗಿನಲ್ಲಿ ಸತತ ಚಿತ್ರಗಳನ್ನು ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. 'ಸೀತಾರಾಮ್' ಚಿತ್ರದ ಮೂಲಕ ದಕ್ಷಿಣ ಭಾರತದ ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದರು. ಇದೀಗ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಜೊತೆ 'ಫ್ಯಾಮಿಲಿ ಸ್ಟಾರ್' ಸಿನಿಮಾದಲ್ಲಿ ನಟಿಸಿದ್ದಾರೆ.
ಫ್ಯಾಮಿಲಿ ಸ್ಟಾರ್ ಸಿನಿಮಾ ಏಪ್ರಿಲ್ 5 ರಂದು ಗ್ರ್ಯಾಂಡ್ ರಿಲೀಸ್ ಆಗಲಿದೆ. ಚಿತ್ರವನ್ನು ದಿಲ್ ರಾಜ್ ನಿರ್ಮಿಸಿದ್ದು, ಗೋಪಿ ಸುಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಇದನ್ನು ಪರುಶು ರಾಮ್ ಪೆಟ್ಲ ನಿರ್ದೇಶಿಸಿದ್ದಾರೆ.
ಮೃಣಾಲ್ ಠಾಕೂರ್ ತಮ್ಮ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಅನೇಕ ಸಂದರ್ಶನಗಳಿಗೆ ಹಾಜರಾಗುತ್ತಿದ್ದಾರೆ. ಇತ್ತೀಚೆಗೆ ವಾಹಿನಿಯೊಂದರಲ್ಲಿ ಮಾತನಾಡಿದ ಮೃಣಾಲ್, ತಮ್ಮ ಸಂಬಂಧ ಮತ್ತು ಸೆಲೆಬ್ರಿಟಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಸಕ್ತಿದಾಯಕ ಕಾಮೆಂಟ್ಗಳನ್ನು ಮಾಡಿದ್ದಾರೆ.
ಇದನ್ನೂ ಓದಿ: ಸಾಯಿ ಪಲ್ಲವಿ ಸ್ಪರ್ಧಿಯಾಗಿದ್ದ ಡ್ಯಾನ್ಸ್ ಶೋ ಅತಿಥಿಯಾಗಿ ಸಮಂತಾ.. ಹಳೆಯ ವಿಡಿಯೋ ವೈರಲ್!
ತಾನು ಯಾರೊಂದಿಗೂ ಸಂಬಂಧ ಹೊಂದಿಲ್ಲ ಎಂದು ಹೇಳಿದ್ದಾರೆ. ಸಂಬಂಧದಲ್ಲಿರುವವರು ಆ ಪ್ರೀತಿಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು. ಇಬ್ಬರೂ ನಿಷ್ಠಾವಂತರಾಗಿರಬೇಕು, ಆಗ ಸಂಬಂಧ ಗಟ್ಟಿಯಾಗುತ್ತದೆ ಎಂದು ಮೃಣಾಲ್ ಹೇಳಿದ್ದಾರೆ.
ಸೆಲೆಬ್ರಿಟಿ ಆಗೋದು ತುಂಬಾ ಕಷ್ಟ. ಶೂಟಿಂಗ್ ಸಮಯದಲ್ಲಿ ಸದಾ ಫ್ಯಾಮಿಲಿಯಿಂದ ದೂರ ಇರಬೇಕಾಗುತ್ತದೆ. ನನಗೆ ಸಹಜ ಜೀವನ ನಡೆಸಲು ಇಷ್ಟ. ನನಗೆ ಇಬ್ಬರು ಮಕ್ಕಳು ಇರಬೇಕು. ಅವರೊಂದಿಗೆ ಊಟಕ್ಕೆ ಹೋದರೆ ಎಷ್ಟು ಚೆನ್ನಾಗಿರುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಐಷಾರಾಮಿ ಬಂಗಲೆಯ ಒಡತಿಯಾದ ರಣಬೀರ್-ಆಲಿಯಾ ಪುತ್ರಿ: ಇದರ ಬೆಲೆಯೆಷ್ಟು ಗೊತ್ತೇ??
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.