MS Dhoni: ನಿರ್ಮಾಣದ ಜೊತೆಗೆ ನಟನೆಗೂ ಧೋನಿ ಎಂಟ್ರಿ! ದಳಪತಿ ವಿಜಯ್ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್!

MS Dhoni : ಎಲ್ಲರ ನೆಚ್ಚಿನ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ನಟನಾಗಿ ತಮ್ಮ ಚೊಚ್ಚಲ ಸಿನಿಮಾದಲ್ಲಿ ನಟಿಸಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಎಂಎಸ್ ಧೋನಿ ನಿರ್ಮಾಪಕರಾಗಿ ತಮಿಳು ಮನರಂಜನಾ ಉದ್ಯಮಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.  

Written by - Chetana Devarmani | Last Updated : Nov 15, 2022, 12:16 PM IST
  • ನಿರ್ಮಾಣದ ಜೊತೆಗೆ ನಟನೆಗೂ ಧೋನಿ ಎಂಟ್ರಿ!
  • ದಳಪತಿ ವಿಜಯ್ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್!
  • ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ
MS Dhoni: ನಿರ್ಮಾಣದ ಜೊತೆಗೆ ನಟನೆಗೂ ಧೋನಿ ಎಂಟ್ರಿ! ದಳಪತಿ ವಿಜಯ್ ಚಿತ್ರದಲ್ಲಿ ಕೂಲ್ ಕ್ಯಾಪ್ಟನ್! title=
ಮಹೇಂದ್ರ ಸಿಂಗ್ ಧೋನಿ

MS Dhoni Acting: ಹರ್ಭಜನ್ ಸಿಂಗ್‌ನಿಂದ ಸ್ಮಿತ್‌ವರೆಗೆ, ಪ್ರಪಂಚದಾದ್ಯಂತದ ಕ್ರಿಕೆಟಿಗರು ಬಾಲಿವುಡ್ ಮತ್ತು ಪ್ರಾದೇಶಿಕ ಚಲನಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಪ್ರೇಕ್ಷಕರು ಆಟಗಾರರನ್ನು ಪರದೆಯ ಮೇಲೆ ವೀಕ್ಷಿಸಲು ಸಂತೋಷಪಡುತ್ತಿದ್ದಾರೆ. ಇದೀಗ ಎಲ್ಲರ ನೆಚ್ಚಿನ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ನಟನಾಗಿ ತಮ್ಮ ಚೊಚ್ಚಲ ಸಿನಿಮಾದಲ್ಲಿ ನಟಿಸಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ : ಯಶೋದಾ ಆಕ್ಷನ್ ಸೀಕ್ವೆನ್ಸ್‌ ಹಿಂದಿನ ಬಿಗ್‌ ಸೀಕ್ರೇಟ್‌ ರಿವೀಲ್‌ ಮಾಡಿದ ಸಮಂತಾ!

ಎಂಎಸ್ ಧೋನಿ ನಿರ್ಮಾಪಕರಾಗಿ ತಮಿಳು ಮನರಂಜನಾ ಉದ್ಯಮಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಅವರ ಚಿತ್ರದಲ್ಲಿ ನಯನತಾರಾ ನಾಯಕಿಯಾಗಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಆದರೆ ಅದರ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ.

ಈ ಮಧ್ಯೆ ಇತ್ತೀಚಿನ ವರದಿಗಳ ಪ್ರಕಾರ, ದಳಪತಿ ವಿಜಯ್ ನಟಿಸಲಿರುವ 67ನೇ ಸಿನಿಮಾ ಮೂಲಕ ಧೋನಿ ಸಿಜಿ ಜರ್ನಿ ಆರಂಭಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ಕಾಲಿವುಡ್ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶಿಸುತ್ತಿದ್ದಾರೆ ಎನ್ನಲಾಗಿದೆ. ಮಹೇಂದ್ರ ಸಿಂಗ್ ಧೋನಿ ಕಾಲಿವುಡ್ ನಿರ್ದೇಶಕ ಲೋಕೇಶ್ ಕನಗರಾಜ್ ಅವರ ಪ್ರಾಜೆಕ್ಟ್‌ಗೆ ಒಪ್ಪಿಕೊಂಡಿದ್ದು, ನಟನೆಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ : ಇತ್ತೀಚಿಗೆ ಅಮ್ಮ, ಅಣ್ಣನನ್ನು ಕಳೆದುಕೊಂಡಿದ್ದ ಮಹೇಶ್‌ಗೆ ಈಗ ಅಪ್ಪನೂ ದೂರ..!

ಕ್ರಿಕೆಟ್‌ ಅಭಿಮಾನಿಯಾಗಿರುವ ದಳಪತಿ ವಿಜಯ್ ಮತ್ತು ಧೋನಿ ಇಬ್ಬರೂ ಒಳ್ಳೆಯ ಸ್ನೇಹಿತರು. ಹೀಗಾಗಿ ವಿಜಯ್ ನಟಿಸಲಿರುವ 67ನೇ ಸಿನಿಮಾ ಮೂಲಕ ಧೋನಿ ಅಭಿನಯ ಆರಂಭಿಸುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಇದೀಗ ಐಪಿಎಲ್ ಜೊತೆಗೆ ಸಿನಿಮಾ ಕ್ಷೇತ್ರದಲ್ಲೂ ಮಹೇಂದ್ರ ಸಿಂಗ್‌ ಧೋನಿ ಗುರುತಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಧೋನಿ ಎಂಟರ್‌ಟೈನ್ಮೆಂಟ್ ಅನ್ನೊ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಸಹ ಆರಂಭಿಸಿದ್ದಾರೆ. ಇನ್ನೂ ತಮಿಳು ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡುವ ಪ್ರಸಿದ್ಧ ಚಲನಚಿತ್ರ ನಿರ್ಮಾಪಕರು ಮತ್ತು ಚಿತ್ರಕಥೆಗಾರರಲ್ಲಿ ಲೋಕೇಶ್ ಕನಕರಾಜ್ ಒಬ್ಬರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News