Sandalwood Updates: ಇದೇ ಶುಕ್ರವಾರ ಬಿಡುಗಡೆಗೆ ಸಜ್ಜಾಗಿರುವ ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳು ಟ್ರೆಂಡ್ ಆಗಿದ್ದು ಮಂಗಳವಾರದಿಂದ ಟಿಕೆಟ್ ಬುಕಿಂಗ್ ಓಪನ್ ಆಗಿದೆ.


COMMERCIAL BREAK
SCROLL TO CONTINUE READING

ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲಿಸಿದ್ದ ಇವರು ಈಗ ನಿರ್ದೇಶನದ ಟೋಪಿ ತೊಟ್ಟಿದ್ದಾರೆ. 'ಕೋಟಿ' ತಂಡ ಬಹುಸಕ್ರಿಯವಾಗಿ ಸಿನಿಮಾ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಬಸ್ಸು, ಮೆಟ್ರೋ, ಟಿವಿ, ಯೂಟ್ಯೂಬ್, ಇನ್ಟಾಗ್ರಾಮ್ ಎಲ್ಲೆಡೆಯೂ ಕೋಟಿ ಸುದ್ದಿ ಮಾಡ್ತಾ ಇದೆ.


ಇದನ್ನೂ ಓದಿ: ಅಂದು ಅರ್ಜುನ್ ತೆಂಡೂಲ್ಕರ್ ಜೊತೆ ಡೇಟ್, ಬಳಿಕ ಕೊಹ್ಲಿಗೆ ಪ್ರಪೋಸ್!! ಇಂದು ಸಲಿಂಗ ವಿವಾಹವಾಗಿ ಶಾಕ್ ನೀಡಿದ ಸ್ಟಾರ್ ಕ್ರಿಕೆಟರ್


ಇತ್ತೀಚೆಗೆ ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ಪ್ರೀ-ರಿಲೀಸ್ ವಿಶೇಷ ಟಿವಿ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ತಂಡಕ್ಕೆ ಶುಭ ಹಾರೈಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೆಟ್ ನೀಡಿತು. ಹತ್ತಾರು ವರ್ಷ ಟಿವಿ, ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿರುವ ಪರಮ್ ಅವರಿಗೆ ಎಲ್ಲೆಡೆ ಸ್ನೇಹಿತರಿದ್ದಾರೆ.


ಇದೇ ಬುಧವಾರ 'ಕೋಟಿ' ತಂಡ ಟೆಲಿವಿಷನ್ ಮತ್ತು ಸಿನಿಮಾತಾರೆಗಳಿಗೆ ಚಿತ್ರದ ಪ್ರೀಮಿಯರ್ ಶೋ ಆಯೋಜಿಸಿದ್ದು. ದೊಡ್ಡ ಸಂಖ್ಯೆಯಲ್ಲಿ ತಾರೆಗಳು ಸೇರುವ ನಿರೀಕ್ಷೆ ಇದೆ. ತಾರೆಗಳಿಗಾಗಿಯೇ ಎರಡೆರಡು ಪ್ರೀಮಿಯರ್ ಶೋಗಳನ್ನು ಆಯೋಜಿಸಿರುವುದೇ ಇದಕ್ಕೆ ಸಾಕ್ಷಿ. ಇದರ ಜತೆಗೆ ಸಿನಿರಸಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳ ಸಹ ಇವೆ.


ಗುರುವಾರ ಮೈಸೂರಿನಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳಿದ್ದು ಧನಂಜಯ್‌ ಮತ್ತು ಚಿತ್ರತಂಡ ಮೈಸೂರಿನ ಸಿನಿರಸಿಕರ ಜತೆ ಸಿನಿಮಾ ನೋಡಲಿದ್ದಾರೆ. ಕೋಟಿ ಸಿನಿಮಾ ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.


ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ 'ಕೋಟಿ' ಗೆಲ್ಲುವ ಭರವಸೆಯಾಗಿ ಕಂಡಿದೆ.


ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.


ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.


ಇದನ್ನೂ ಓದಿ: ಯುವ ವಿಚ್ಛೇದನದ ಹಿಂದಿರುವ ಆ ಪ್ರಸಿದ್ಧ ನಟಿ ಬೇರಾರು ಅಲ್ಲ… ಸಪ್ತಮಿ ಗೌಡ!! ನೋಟಿಸ್’ನಲ್ಲಿ ಹೆಸರು ಉಲ್ಲೇಖಿಸಿದ ಶ್ರೀದೇವಿ


ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.