ʼಬನಾರಸ್‌ʼ ದಾಖಲೆ : ಬಹು ಮೊತ್ತಕ್ಕೆ ಮಾರಾಟವಾಯ್ತು ಸಿನಿಮಾ ವಿತರಣಾ ಹಕ್ಕು..!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಝೈದ್ ಖಾನ್ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದ್ದು, ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ.

Written by - Krishna N K | Last Updated : Oct 6, 2022, 02:48 PM IST
  • ಬಹು ಮೊತ್ತಕ್ಕೆ ಮಾರಾಟವಾಯ್ತು ಬನಾರಸ್‌ ಸಿನಿಮಾ ವಿತರಣಾ ಹಕ್ಕು
  • ಕೇರಳದಲ್ಲಿ ವಿತರಣಾ ಹಕ್ಕು ಪಡೆದುಕೊಂಡ ಮಲಕುಪ್ಪಡಮ್ ಸಂಸ್ಥೆ
  • ಕೇರಳದ ತುಂಬೆಲ್ಲ ಬನಾರಸ್ ಬಗೆಗೀಗ ಬೇರೆಯದ್ದೇ ದಿಕ್ಕಿನಲ್ಲಿ ನಿರೀಕ್ಷೆ
ʼಬನಾರಸ್‌ʼ ದಾಖಲೆ : ಬಹು ಮೊತ್ತಕ್ಕೆ ಮಾರಾಟವಾಯ್ತು ಸಿನಿಮಾ ವಿತರಣಾ ಹಕ್ಕು..! title=

ಬೆಂಗಳೂರು : ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಝೈದ್ ಖಾನ್ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದ್ದು, ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ.

ಈಗಾಗಲೇ ಕೇರಳದಲ್ಲಿ ದೊಡ್ಡ ಹೆಸರು ಮಾಡಿರುವ ಸಂಸ್ಥೆ ಹಲವಾರು ಹಿಟ್ ಸಿನಿಮಾಗಳನ್ನು ಬಿಡುಗಡೆಗೊಳಿಸಿದೆ. ಆದ್ದರಿಂದಲೇ ಕೇರಳದ ತುಂಬೆಲ್ಲ ಬನಾರಸ್ ಬಗೆಗೀಗ ಬೇರೆಯದ್ದೇ ದಿಕ್ಕಿನಲ್ಲಿ ನಿರೀಕ್ಷೆ ಮೂಡಿಕೊಂಡಿದೆ. ಈ ವಿಚಾರವನ್ನು ಖುದ್ದು ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿಕೊಂಡಿದೆ. ತೋಮಿಚನ್‌ ಮುಪಕುಪ್ಪದಮ್‌ ಎಂದೇ ಖ್ಯಾತಿಯಾಗಿರುವ  ಬಿಗ್‌ ಬ್ಯುಸಿನೆಸ್ ಮೆನ್ ಥಾಮಸ್ ಆಂಟೋನಿ ಮಲಕುಪ್ಪಡಮ್ ಫಿಲಂಸ್ ಮೂಲಕ ಹಲವಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಅದರೊಂದಿಗೇ ಮಲಕುಪ್ಪಡಮ್ ರಿಲೀಸ್ ಸಂಸ್ಥೆಯ ಮೂಲಕ ಹಲವಾರು ಸಿನಿಮಾಗಳ ವಿತರಕರಾಗಿಯೂ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಹೆಡ್‌ಬುಷ್‌ ʼಹಬೀಬಿʼ ಸಾಂಗ್‌ ಔಟ್‌ : ನಟರಾಕ್ಷಸನಿಂದ ʼಪದ ರಾಕ್ಷಸʼನಾದ ಡಾಲಿ..! 

ಸದ್ಯ ಪ್ರಖ್ಯಾತ ಸಂಸ್ಥೆಯೊಂದು ಮೊದಲ ಬಾರಿಗೆ ನಾಯಕ ನಟನಾಗಿ ಸಿನಿ ರಂಗಕ್ಕೆ ಎಂಟ್ರಿಕೊಟ್ಟಿರುವ ಝೈದ್‌ ಖಾನ್‌ ಸಿನಿಮಾ ವಿರತಣೆ ಮಾಡುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ವಿಶೇಷವೆಂದರೆ, ತೋಮಿಚನ್‌ ಮುಪಕುಪ್ಪದಮ್‌ ಬನಾರಸ್ ಮೂಡಿ ಬಂದಿರುವ ರೀತಿ ಕಂಡು ಥ್ರಿಲ್ ಆಗಿದ್ದಾರೆ. ಆ ಮೆಚ್ಚುಗೆಯಿಂದಲೇ ದೊಡ್ಡ ಮೊತ್ತಕ್ಕೆ ಬನಾರಸ್ ವಿತರಣಾ ಹಕ್ಕುಗಳನ್ನು ಖರೀದಿಸಿದ್ದಾರೆ ಎನ್ನಲಾಗಿದೆ.

ಇದೇ ನವೆಂಬರ್ ನಾಲಕ್ಕರಂದು ಕೇರಳದಲ್ಲಿ ಬನಾರಸ್ ಬಿಡುಗಡೆಯಾಗಲಿದೆ. ಹೊಸ ಹೀರೋನ ಚಿತ್ರವೊಂದು ಇಷ್ಟು ದೊಡ್ಡ ಮೊತ್ತದ ವ್ಯವಹಾರ ನಡೆಸಿರೋದೊಂದು ದಾಖಲೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದಾಗಿ ನವನಾಯಕ ಝೈದ್ ಖಾನ್ ಪಾಲಿಗೂ ಹೊಸಾ ಭರವಸೆ, ಹುರುಪು ಮೂಡಿದಂತಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News