ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು".‌ ಸುಮುಖ ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಜಿ.ಗಂಗಾಧರ್ ಈ ಚಿತ್ರದ ಸಹ ನಿರ್ಮಾಪಕರು. ಬೆಂಗಳೂರಿನ ಅರಮನೆ ಆವರಣದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರತಂಡ ಮಾಧ್ಯಮದ ಮಿತ್ರರನ್ನು ಚಿತ್ರೀಕರಣ ವೀಕ್ಷಣೆ ಹಾಗೂ ಪತ್ರಿಕಾಗೋಷ್ಠಿಗೆ ಆತ್ಮೀಯವಾಗಿ ಆಹ್ವಾನಿಸಿತ್ತು. ಚಿತ್ರದ ಶೀರ್ಷಿಕೆ ಸಹ ಇದೇ ಸಂದರ್ಭದಲ್ಲಿ ಅನಾವರಣವಾಯಿತು ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.


COMMERCIAL BREAK
SCROLL TO CONTINUE READING

 ‘ಮುಂಗಾರು ಮಳೆ’ ನಂತರ ಇ. ಕೃಷ್ಣಪ್ಪ ರವರ ನಿರ್ಮಾಣದಲ್ಲಿ ಇನ್ನೊಂದು ಚಿತ್ರ ನಿರ್ದೇಶನ ಮಾಡುವ ಯೋಚನೆ ಇತ್ತು ಎಂದು ಮಾತನಾಡಿದ ನಿರ್ದೇಶಕ ಯೋಗರಾಜ್ ಭಟ್, ಆದರೆ ಅವರು ರಾಜಕೀಯದಲ್ಲಿ ಮತ್ತು ನಾನು ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾದೆ. ಕೊರೋನ ನಂತರ ಮತ್ತೆ ಒಟ್ಟಿಗೆ ಚಿತ್ರ ಮಾಡುವುದು ನಿರ್ಧಾರವಾಯಿತು. ಹೊಸಬರ  ಜೊತೆಗೆ ಸಿನಿಮಾ ಮಾಡೋಣ ಎಂದು ಕೃಷ್ಣಪ್ಪ ಹೇಳಿದರು. ಹೊಸಬರ ಜೊತೆಗೆ ಸಿನಿಮಾ ಮಾಡೋದು ಸುಲಭವಲ್ಲ. ಈ ಚಿತ್ರಕ್ಕೆ ಹೀರೋ ಸಿಕ್ಕಿರಲಿಲ್ಲ.ಆಗಲೇ ಯಾವುದೋ ಕೆಲಸದ ವಿಷಯವಾಗಿ ಸುಮುಖ ಫೋನ್‍ ಮಾಡಿದ್ದ. ಫೋಟೋ ಕಳುಹಿಸು ಎಂದೆ. ಅವನು ಎಲ್ಲರಿಗೂ ಇಷ್ಟವಾದ. ಜೊತೆಗೆ ರಾಶಿಕಾ ಶೆಟ್ಟಿ, ಅಂಜಲಿ ಅನೀಶ್‍, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಅದರಲ್ಲೂ ಕರ್ನಾಟಕದ 12 ಜಿಲ್ಲೆಗಳಲ್ಲಿ ಜಿತ್ರೀಕರಣ ಮಾಡಿದ್ದೇವೆ. ಮಹಾರಾಷ್ಟ್ರದ ಮುರುಡ್‍ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಿದ್ದೇವೆ. ಅದಕ್ಕೆ 15 ರೀತಿಯ ಪರ್ಮಿಷನ್‍ ಬೇಕು. ಅದೊಂದು ಯುದ್ಧ ಮಾಡಿದ ಅನುಭವ. ಬಿಸಿಲು, ರಣಮಳೆಯ ನಡುವೆ ಚಿತ್ರೀಕರಣ ಸುಲಭವಲ್ಲ. ಆದರೆ, ಬಹಳ ಚೆನ್ನಾಗಿ ಬಂದಿದೆ. ಇಲ್ಲಿ ರಂಗಾಯಣ ರಘು ಆದಿವಾಸಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಗಾಗಿ ಹೊಸ ಭಾಷೆ ಸೃಷ್ಟಿ ಮಾಡಿದ್ದೇವೆ. ರಂಗಾಯಣ ರಘು ಸಹ ಬಹಳ ಚೆನ್ನಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ. ಈಗಾಗಲೇ ಶೇ. 95ರಷ್ಟು ಚಿತ್ರೀಕರಣ ಮುಗಿದಿದೆ ಎಂದರು .


ಇದನ್ನೂ ಓದಿ: ವಿಷದ ಹಲ್ಲಿಗಳು: ಹಾವುಗಳಿಗಿಂತ ವಿಷಕಾರಿ ಹಲ್ಲಿಗಳು.. ನೀವು ಯಾವಾಗಲಾದರೂ ಅವುಗಳನ್ನು ಕೆಂಪು ಬಣ್ಣದಲ್ಲಿ ನೋಡಿದ್ದೀರಾ?


ಕಥೆ ಚೆನ್ನಾಗಿರಬೇಕು. ಕನ್ನಡಿಗರು ಮೆಚ್ಚುವ ಹಾಗೆ ಮಾಡಬೇಕು. ಇದೊಂದು ಪ್ರಾಮಾಣಿಕ ಪ್ರಯತ್ನ. ಕನ್ನಡದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿವೆ. ಅವರನ್ನು ಸರಿಯಾಗಿ ಗುರುತಿಸುವ ಕೆಲಸವಾಗುತ್ತಿಲ್ಲ. ಹೊಸಬರಿಗೆ ಒಳ್ಳೇದಾಗಬೇಕು. ಇದು ಸಹ "ಮುಂಗಾರು ಮಳೆ" ಮಟ್ಟಕ್ಕೆ ಹೋಗಬೇಕು. ಮಧ್ಯೆ ರಾಜಕಾರಣಕ್ಕೆ ಹೋಗಿದ್ದರಿಂದ ಚಿತ್ರ ಮಾಡಲು ಸಾಧ್ಯವಾಗಿರಲಿಲ್ಲ. ಯೋಗರಾಜ್‍ ಭಟ್‍ ಸಹ ಬ್ಯುಸಿಯಾಗಿದ್ದರು. ಈಗ ಅದು ಸಾಧ್ಯವಾಗಿದೆ ಎಂದರು ನಿರ್ಮಾಪಕ ಇ.ಕೃಷ್ಣಪ್ಪ.  


"ಮುಂಗಾರು ಮಳೆ" ಚಿತ್ರದಿಂದ ಇ.ಕೃಷ್ಣಪ್ಪ ಅವರ ನಿರ್ಮಾಣದ ಎಲ್ಲಾ ಚಿತ್ರಗಳಲ್ಲೂ ಸಹ ನಿರ್ಮಾಪಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಯೋಗರಾಜ್ ಭಟ್ ಅವರ ಜೊತೆಗೆ ಹದಿನೆಂಟು ವರ್ಷಗಳ ನಂತರ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ ಎನ್ನುತ್ತಾರೆ ಸಹ ನಿರ್ಮಾಪಕ ಗಂಗಾಧರ್.


 ನಟ ಎಂದರೆ ಜಿಮ್‍ನಿಂದ ಬರಬೇಕು ಎಂಬಂತಾಗಿದೆ. ಅವರಿಗೆ ಭಾಷೆ-ಭಾವ ಗೊತ್ತಿರುವುದಿಲ್ಲ. ಸಿನಿಮಾಗೆ ಬೇಕಾಗಿದ್ದು ಅಭಿನಯ ಅನ್ನೋದನ್ನೇ ಅವರು ಮರೀತಾರೆ. ಆದರೆ, ಸುಮುಖನಿಗೆ ಅಂಥ ಯಾವ ರೋಗ ಇಲ್ಲ. ಇವನು ಓದಿಕೊಂಡಿದ್ದಾನೆ. ಸಿನಿಮಾ ಬಗ್ಗೆ ತಿಳಿದುಕೊಂಡಿದ್ದಾನೆ. ಚೆನ್ನಾಗಿ ನಟಿಸುತ್ತಾನೆ. ಭಟ್ರು ಮತ್ತು ಕೃಷ್ಣಪ್ಪ ಹೊಸಬರ ಜೊತೆಗೆ ಕೆಲಸ ಮಾಡಿದ್ದಾರೆ. ಶೀರ್ಷಿಕೆ ಬಹಳ ಚೆನ್ನಾಗಿದೆ. ಪ್ಯಾನ್‍ ಇಂಡಿಯಾ ಸಿನಿಮಾ ಬೇಡ, ಕನ್ನಡ ಸಿನಿಮಾ ಮಾಡೋಣ ಎಂದರಂತೆ ಕೃಷ್ಣಪ್ಪ. ಹೌದು, ಎಲ್ಲರೂ ಅಲ್ಲಿಗೆ ಹೋದರೆ ಇಲ್ಲಿ ಮನೆ ನೋಡಿಕೊಳ್ಳೋದು ಯಾರು ಎಂದರು ನಟ ರಂಗಾಯಣ ರಘು.


ಇದನ್ನೂ ಓದಿ:  ತಿರುಮಲ: ದಂಗೆಯೆದ್ದ ತಿರುಮಲ.. ತಮಾಷೆ ವಿಡಿಯೋಗಳಿಗೆ ಕ್ಷೇತ್ರ


ಯೋಗರಾಜ್‍ ಭಟ್‍ ಬಹಳ ಮುತ್ತುವರ್ಜಿಯಿಂದ ನನ್ನ ಪಾತ್ರ ಸೃಷ್ಟಿಸಿದ್ದಾರೆ. ಈ ಚಿತ್ರದಲ್ಲಿ ನಾನು 100 ವರ್ಷದ ಮುದುಕನ ಪಾತ್ರ ಮಾಡಿದ್ದೇನೆ. ಆದರೆ, ಅವನದ್ದು 70 ವರ್ಷಗಳ ಚೈತನ್ಯ. ವಯಸ್ಸಾಯ್ತು ಅಂತ ತಲೆ ಆಡಿಸುವ ಹಾಗಿಲ್ಲ, ಮೈ ಬಗ್ಗಿಸುವ ಹಾಗಿಲ್ಲ. ಸಾತ್ವಿಕವಾಗಿ ತನ್ನ ವಯಸ್ಸನ್ನು ಅಭಿನಯದ ಮೂಲಕ ಹೇಳುವಂತಹ ಪಾತ್ರ. ಬಹಳ ಚೆನ್ನಾಗಿದೆ ಎಂದು ನಟ ದತ್ತಣ್ಣ ತಿಳಿಸಿದರು. 


ಈಗಿನ ಕಾಲದ ನವಯುವಕನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈಗಿನವರು ಜೀವನದಲ್ಲಿ ಏನು ಮಾಡಬೇಕು? ಎಂಬ ಗೊಂದಲದಲ್ಲಿರುತ್ತಾರೆ. ಅದು ಈ ಚಿತ್ರದಲ್ಲಿದೆ. ಇದೊಂದು ದೊಡ್ಡ ಜವಾಬ್ದಾರಿ. ಯೋಗರಾಜ್‍ ಭಟ್‍ ಅವರ ಜೊತೆಗೆ ತುಂಬಾ ಕಲಿಯೋದಿದೆ. ಪ್ರತಿದಿನ ಅವರು ಹೊಸ ಆಲೋಚನೆಯೊಂದಿಗೆ ಬರುತ್ತಾರೆ. ಹೊಸ ಪ್ರಯೋಗ ಮಾಡುತ್ತಾರೆ ಎಂದು ನಾಯಕ ಸುಮುಖ ಹೇಳಿದರು.


ನಾಯಕಿಯರಾದ ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ಛಾಯಾಗ್ರಾಹಕ ಸಂತೋಷ್‍ ರೈ ಪಾತಾಜೆ, ಗೀತರಚನೆಕಾರ ಜಯಂತ್‍ ಕಾಯ್ಕಿಣಿ, ಪ್ರತಾಪ್‍ ರಾವ್‍ ಮುಂತಾದವರು ತಮ್ಮ ಅನುಭವಗಳನ್ನು ಹಂಚಿಕೊಂಡರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.