ಎದೆ ನೋವು ಹಿನ್ನಲೆ ಆಸ್ಪತ್ರೆಗೆ ದಾಖಲಾದ ನಾದ ಬ್ರಹ್ಮ ಹಂಸಲೇಖ..!

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Written by - Krishna N K | Last Updated : Oct 10, 2022, 01:24 PM IST
  • ಎದೆ ನೋವು ಹಿನ್ನಲೆ ಆಸ್ಪತ್ರೆಗೆ ದಾಖಲಾದ ನಾದ ಬ್ರಹ್ಮ ಹಂಸಲೇಖ
  • ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು
  • ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿರುವ ಹಂಸಲೇಖ
ಎದೆ ನೋವು ಹಿನ್ನಲೆ ಆಸ್ಪತ್ರೆಗೆ ದಾಖಲಾದ ನಾದ ಬ್ರಹ್ಮ ಹಂಸಲೇಖ..! title=

ಬೆಂಗಳೂರು : ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಹಂಸಲೇಖ ಅವರು ರಾಜಾಜಿನಗರದ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರೆ ಏನೂ ತೊಂದರೆ ಇಲ್ಲ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. 

ಇದನ್ನೂ ಓದಿ: ಮುಲಾಯಂ ಸಿಂಗ್ ಯಾದವ್ ನಿಧನ: ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿ ಅನೇಕ ಗಣ್ಯರ ಸಂತಾಪ

ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್‌ನಲ್ಲೆ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News