My Hero movie : ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ʼಮೈ ಹೀರೊʼ ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಯುಎಸ್‌ಎ ನಲ್ಲಿ ನಡೆಯಲಿದೆ.


COMMERCIAL BREAK
SCROLL TO CONTINUE READING

ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು. ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.


ಇದನ್ನೂ ಓದಿ: Nishvika Naidu : ʼ8 ಪ್ಯಾಕ್ಸ್‌ʼ ನಲ್ಲಿ ಸ್ಯಾಂಡಲ್‌ವುಡ್‌ ಬ್ಯೂಟಿ..! ನಿಶ್ವಿಕಾ ಫಿಟ್ನೆಸ್‌ಗೆ ಫ್ಯಾನ್ಸ್‌ ಫಿದಾ


ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ "ಮೈ ಹೀರೊ" ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.