Kalki 2898AD: ಪ್ರಭಾಸ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಾಗಾರ್ಜುನ.. ಕ್ರೇಜಿ ಕಾಂಬಿನೇಷನ್ ಎಂದ ಫ್ಯಾನ್ಸ್!!

Nagarjuna in Kalki 2898AD: ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ನಿರ್ದೇಶಕ ನಾಗ ಅಶ್ವಿನ್ ಆಕ್ಷನ್‌ ಕಟ್‌ ಹೇಳುತ್ತಿರುವ ಕಲ್ಕಿ 2898AD ಸಿನಿಮಾ ಬಗ್ಗೆ ಬಿಗ್‌ ಅಪ್‌ಡೇಟ್‌ ಹೊರಬಿದ್ದಿದೆ. 

Written by - Chetana Devarmani | Last Updated : Apr 8, 2024, 01:07 PM IST
  • ಕಲ್ಕಿ 2898AD ಸಿನಿಮಾ ಬಗ್ಗೆ ಬಿಗ್‌ ಅಪ್‌ಡೇಟ್‌
  • ಪ್ರಭಾಸ್ ಸಿನಿಮಾದಲ್ಲಿ ನಾಗಾರ್ಜುನ
  • ಪ್ರಭಾಸ್ ನಟನೆಯ ಕಲ್ಕಿ ಸಿನಿಮಾ
Kalki 2898AD: ಪ್ರಭಾಸ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಾಗಾರ್ಜುನ.. ಕ್ರೇಜಿ ಕಾಂಬಿನೇಷನ್ ಎಂದ ಫ್ಯಾನ್ಸ್!! title=

Nagarjuna in Prabhas movie: ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ನಿರ್ದೇಶಕ ನಾಗ ಅಶ್ವಿನ್ ಆಕ್ಷನ್‌ ಕಟ್‌ ಹೇಳುತ್ತಿರುವ ಕಲ್ಕಿ 2898AD ಸಿನಿಮಾ ಬಗ್ಗೆ ಬಿಗ್‌ ಅಪ್‌ಡೇಟ್‌ ಹೊರಬಿದ್ದಿದೆ. ಈ ಚಿತ್ರದ ಬಗ್ಗೆ ಹಲವು ಕುತೂಹಲಕಾರಿ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗಷ್ಟೇ ಈ ಸಿನಿಮಾದಲ್ಲಿ ಟಾಲಿವುಡ್ ಕಿಂಗ್ ನಾಗಾರ್ಜುನ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.

ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ 2898AD ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಹುಟ್ಟಿಕೊಂಡಿದೆ. ಫ್ಯಾಂಟಸಿ ಸೈಂಟಿಫಿಕ್ ಚಿತ್ರವಾಗಿ ತಯಾರಾಗುತ್ತಿರುವ ಕಲ್ಕಿ 2898AD ಚಿತ್ರದ ಬಗ್ಗೆ ಈಗಾಗಲೇ ಹಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.  

ಕಲ್ಕಿ 2898AD ಸಿನಿಮಾದ ಕ್ಲೈಮ್ಯಾಕ್ಸ್ ತುಂಬಾ ಅದ್ಭುತವಾಗಿ ಮೂಡಿಬರಲಿದ್ದು, ಕ್ಲೈಮ್ಯಾಕ್ಸ್ ನಲ್ಲಿ ಯಂಗ್ ಟೈಗರ್ ಎನ್ ಟಿಆರ್ ಪರಶುರಾಮನ ಪಾತ್ರದಲ್ಲಿ ನಟಿಸುತ್ತಿದ್ದು, ನ್ಯಾಚುರಲ್ ಸ್ಟಾರ್ ನಾನಿ ಕೃಷ್ಣಾಚಾರ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರಿಂದಾಗಿ ಈ ಚಿತ್ರದ ಮೇಲೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Pushpa 2 Teaser: ಅಲ್ಲು ಅರ್ಜುನ್ ನಟನೆಯ 'ಪುಷ್ಪ 2 ದಿ ರೂಲ್' ಟೀಸರ್ ಬಿಡುಗಡೆ 

ಚಿತ್ರತಂಡ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಕಲ್ಕಿ 2898AD ಚಿತ್ರದಲ್ಲಿ ಪರಶುರಾಮ್ ಪಾತ್ರವು ನಿರ್ಣಾಯಕವಾಗಲಿದೆ. ಹಾಗಾಗಿ ಪರಶುರಾಮ್ ಪಾತ್ರಕ್ಕೆ ಬೇರೊಬ್ಬ ನಟನ ಬಗ್ಗೆ ನಿರ್ದೇಶಕರು ಯೋಚಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈಗ ಆ ಪಾತ್ರದಲ್ಲಿ ಟಾಲಿವುಡ್ ಕಿಂಗ್ ನಾಗಾರ್ಜುನ ನಟಿಸಲಿದ್ದಾರೆ ಎಂಬ ಹೊಸ ಸುದ್ದಿಗಳು ಹರಿದಾಡುತ್ತಿವೆ.

ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಕಲ್ಕಿ 2898AD ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸಲಿದ್ದಾರೆ. ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಜೊತೆಗೆ ಕಮಲ್ ಹಾಸನ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಈ ಚಿತ್ರವು ಪ್ಯಾನ್ ಇಂಡಿಯಾ ಶ್ರೇಣಿಯಲ್ಲಿ ಎಲ್ಲಾ ಭಾರತೀಯ ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ವೈಜಯಂತಿ ಮೂವೀಸ್ ಬ್ಯಾನರ್‌ ಅಡಿ ಅಶ್ವಿನಿ ದತ್ ಭಾರೀ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. 

ಇದನ್ನೂ ಓದಿ: ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿಗಿಂತಲೂ ಸುಂದರಿ ಅವರ ಮೊದಲ ಗರ್ಲ್‌ಫ್ರೆಂಡ್!!‌ ಯಾರು ಗೊತ್ತೇ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News