ಬೆಂಗಳೂರು: ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ಕೊಡ ಮಾಡುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಮೊದಲ ಭಾಗ ಎನ್ನುವಂತೆ ನಂದಿ ಅವಾರ್ಡ್ ಲೋಗೋ ಬಿಡುಗಡೆ ಮಾಡಲಾಗಿದೆ. ನಾಡಿನ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಗೋ ಲಾಂಚ್ ಮಾಡಿ ಶುಭ ಕೋರಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕರಣ್ ಜೋಹರ್ ಮುಂದಿನ ಸಿನಿಮಾದಲ್ಲಿ ಸಲ್ಲು ಜತೆ ರೊಮ್ಯಾನ್ಸ್ ಮಾಡೋ ಆ ಸೌತ್‌ ನಟಿ ಯಾರು?


ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ನಿನ್ನೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಲೋಗೋ ಅನಾವರಣ ಮಾಡಿಸಿದ್ದಾರೆ. ಅನಿತಾ ರೆಡ್ಡಿ, ನಿತ್ಯನಂದ ಪ್ರಭು, ಪದ್ಮವತಿ ಚಂದ್ರಶೇಖರ್, ಭಾಮಾ ಗಿರೀಶ್, Aiplex ಗಿರೀಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಇದನ್ನೂ ಓದಿ: ತನ್ನದೇ ತಂಡದ ಆಟಗಾರರಗೆ ಬಾಯಿಗೆ ಬಂದಂತೆ ಬೈದ ಬಾಬರ್ ಅಜಂ! ಮೈದಾನದಲ್ಲೇ ಕಣ್ಣೀರಿಟ್ಟ ಪ್ಲೇಯರ್ಸ್


ನಂದಿ..ಕನ್ನಡದ ಹೆಮ್ಮೆ..ಈ ಹೆಸರಿನಲ್ಲಿ ಪ್ರಶಸ್ತಿ ಕೊಡಬೇಕೆಂಬು ಸಿನಿಮಾ ರಂಗದ ಸ್ನೇಹಿರೊಟ್ಟಿಗೆ ಚರ್ಚಿಸಿ ಈ ತೀರ್ಮಾನ ಮಾಡಲಾಗಿದೆ ಎಂದು ಅಧ್ಯಕ್ಷ ಭಾ.ಮಾಹರೀಶ್ ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಪ್ರತಿ ವರ್ಷ ಸಿನಿಮಾ ರಂಗದಲ್ಲಿ ಸಾಧನೆ ಮಾಡಿ ಕಲಾವಿದರನ್ನು ಸನ್ಮಾನಿಸಿ ಗೌರವಿಸಿ ನಂದಿ ಪ್ರಶಸ್ತಿ ನೀಡಲಾಗುತ್ತದೆ.


ಸದ್ಯ ನಂದಿ ಪ್ರಶಸ್ತಿ ಲೋಗೋ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ರಮ ರೂಪರೇಷೆಗಳನ್ನು ತಿಳಿಸಲಾಗುತ್ತದೆ. ಸೈಮಾ, ಫಿಲ್ಮಂ ಫೇರ್ ಮಾದರಿಯಲ್ಲಿಯೇ ಕನ್ನಡ ಸಿನಿಮಾರಂಗಕ್ಕೆ ಪ್ರತ್ಯಕ್ಷ ಪ್ರಶಸ್ತಿ ನಂದಿ ಎನ್ನುತ್ತಾರೆ ವಾಣಿಜ್ಯ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ