ಜೂ. 30ಕ್ಕೆ ತೆರೆಗೆ ಬರ್ತಿದೆ ಮಹಿಳಾ ಪ್ರಧಾನ ಚಿತ್ರ ‘ನಾನು ಕುಸುಮ’

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೇನು ಶೋಷಣೆಗಳನ್ನು ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥಾಹಂದರ ಸಾಗುತ್ತದೆ. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭ ಸಂಶಿಮಠ್, ವಿಜಯ್ ಮೊದಲಾದವರು ‘ನಾನು ಕುಸುಮ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ

Written by - Zee Kannada News Desk | Edited by - Bhavishya Shetty | Last Updated : Jun 18, 2023, 11:11 AM IST
    • ನಾನು ಕುಸುಮ’ ಜೂನ್ 30 ರಂದು ರಾಜ್ಯಾದ್ಯಂತ ಪ್ರೇಕ್ಷಕರ ಮುಂದೆ ಬರುತ್ತಿದೆ.
    • ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೇನು ಶೋಷಣೆಗಳನ್ನು ಅನುಭವಿಸುತ್ತಾಳೆ ಎಂಬುದು ಕಥಾಹಂದರ
    • ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿ, ಪ್ರಶಂಸೆಗಳನ್ನು ತನ್ನದಾಗಿಸಿಕೊಂಡಿದೆ
ಜೂ. 30ಕ್ಕೆ ತೆರೆಗೆ ಬರ್ತಿದೆ ಮಹಿಳಾ ಪ್ರಧಾನ ಚಿತ್ರ ‘ನಾನು ಕುಸುಮ’ title=
Naanu Kusuma

ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಅವರ ಕಥೆಯನ್ನು ಆಧರಿಸಿ ತಯಾರಾಗಿರುವ ಕೃಷ್ಣೇಗೌಡ ನಿರ್ಮಿಸಿ, ನಿರ್ದೇಶಿಸಿರುವ ‘ನಾನು ಕುಸುಮ’ ಸಿನಿಮಾ ಜೂನ್ 30ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರ ಮುಂದೆ ಬರುತ್ತಿದೆ.

ಇದನ್ನೂ ಓದಿ: ಗುಡ್ ನ್ಯೂಸ್..! ವಿಶ್ವಕಪ್’ಗೂ ಮುನ್ನ ತಂಡಕ್ಕೆ ಹೊಸ ಕೋಚ್ ನೇಮಕ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೇನು ಶೋಷಣೆಗಳನ್ನು ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥಾಹಂದರ ಸಾಗುತ್ತದೆ. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭ ಸಂಶಿಮಠ್, ವಿಜಯ್ ಮೊದಲಾದವರು ‘ನಾನು ಕುಸುಮ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

 ಇತ್ತೀಚೆಗಷ್ಟೇ ನಡೆದ ‘14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಪ್ರಥಮ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದುಕೊಂಡಿರುವ ‘ನಾನು ಕುಸುಮ’ ಈಗಾಗಲೇ ಇಂಡಿಯನ್ ಪನೋರಮಾ, ರಾಜಸ್ಥಾನ್ ಫಿಲಂ ಫೆಸ್ಟಿವಲ್, ತ್ರಿಶೂರ್ ಫಿಲಂ ಫೆಸ್ಟಿವಲ್ ಹೀಗೆ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿ, ಪ್ರಶಂಸೆಗಳನ್ನು ತನ್ನದಾಗಿಸಿಕೊಂಡಿದೆ.

‘ನಾನು ಕುಸುಮ’ ಸಿನಿಮಾಕ್ಕೆ ಅರ್ಜುನ್ ರಾಜಾ ಛಾಯಾಗ್ರಹಣವಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ಆಸ್ಪತ್ರೆ, ವಾರ್ಡ್, ಗಲ್ಲಿ, ಮನೆ... ಹೀಗೆ ಸಿನಿಮಾದಲ್ಲಿ ಬರುವ ಎಲ್ಲ ಸ್ಥಳಗಳನ್ನು ನೈಜ ಲೊಕೇಶನ್ ಗಳಲ್ಲೇ ಚಿತ್ರೀಕರಿಸಲಾಗಿದ್ದು, ಸಿಂಕ್ ಸೌಡ್ ನಲ್ಲಿ ಹಿನ್ನೆಲೆ ಧ್ವನಿಗ್ರಹಣ ಮಾಡಿರುವುದು ಸಿನಿಮಾದ ಮತ್ತೊಂದು ವಿಶೇಷತೆ.

ಇದನ್ನೂ ಓದಿ: ʼಭರ್ಜರಿ ಬ್ಯಾಚುಲರ್‌ʼಗಳ ಕಾಲೆಳೆಯೋರು ಇವರೇ..ಜೀ ಕನ್ನಡಕ್ಕೆ ಮರಳಿದ ಅಕುಲ್‌ ಬಾಲಾಜಿ..!   

ಸದ್ಯ ಈಗಾಗಲೇ ಚಿತ್ರೋತ್ಸವಗಳ ಮೂಲಕ ಚಿತ್ರರಂಗದಲ್ಲಿ ಅನೇಕ ಖ್ಯಾತನಾಮರ ಗಮನ ಸೆಳೆದಿರುವ ‘ನಾನು ಕುಸುಮ’ ಜೂನ್ 30 ರಂದು ರಾಜ್ಯಾದ್ಯಂತ ಪ್ರೇಕ್ಷಕರ ಮುಂದೆ ಬರುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News