Narasimha Raju Birth Centenary: ಖ್ಯಾತ ಹಾಸ್ಯ ನಟ ದಿ. ಟಿಆರ್ ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 24 ಕ್ಕೆ ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬವಿದೆ. ಈ ದಿನದಂದು ನರಸಿಂಹರಾಜು ಜನ್ಮ‌ ಶತಮಾನೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. ನರಸಿಂಹರಾಜು ಜನ್ಮ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ಹಲವು ಕಾರ್ಯಕ್ರಮಗಳನ್ನ ನಡೆಸಲಾಗುವುದು. ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ವರ್ಷವಿಡೀ ನರಸಿಂಹರಾಜು ಜನ್ಮ ಶತಮಾನೋತ್ಸವ ಆಚರಿಸಲು ಯೋಜನೆ ರೂಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈ ಮೂಲಕ ತಮ್ಮ ನಟನೆಯ ಮೂಲಕ ನಗುವಿನ ಕಡಲಲ್ಲಿ ಪ್ರೇಕ್ಷಕರನ್ನ ತೇಲಿಸಿದ ನಟ ನರಸಿಂಹರಾಜು ಅವರನ್ನು ಇಂದಿನ ಯುವಜನತೆಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡಿ ನರಸಿಂಹರಾಜು ಜನ್ಮ ಶತಮಾನೋತ್ಸವ ಆಚರಿಸಲಿದ್ದಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ನಟನೆಯ ಕೆಲವು ತುಣುಕುಗಳನ್ನು ತೋರಿಸಲಾಗುತ್ತದೆ. ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆಯನ್ನು ಸಹ ಆಯೋಜಿಸಲಿದ್ದಾರೆ. 


ಇದನ್ನೂ ಓದಿ: ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಾಂಗ್ ರಿಲೀಸ್; ನೀವು ಕೇಳಿದ್ರಾ..?


ನರಸಿಂಹರಾಜು ಜನ್ಮ ಶತಮಾನೋತ್ಸವ ಅಂಗವಾಗಿ ಹಾಸ್ಯದ ಕುರಿತು ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ ಆಯೋಜಿಸಲಿದ್ದಾರೆ. ಈ ಕಿರು ಚಿತ್ರೋತ್ಸವದಲ್ಲಿ ಗೆದ್ದವರಿಗೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಮಾರಂಭ ಆಯೋಜಿಸಿ, ಬಹುಮಾನ ನೀಡಲಾಗುತ್ತದೆ. ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು ಅಹ ಆಯೋಜಿಸಲಾಗುವುದು.


ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಇರುವ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ಜನಪ್ರಿಯ ನಾಟಕಗಳನ್ನು ಸೂರ್ಯಾಸ್ತದಿಂದ ಸೂರ್ಯೋದಯದವರೆಗೂ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಹೀಗೆ ನರಸಿಂಹರಾಜು ಜನ್ಮ ಶತಮಾನೋತ್ಸವ ಅಂಗವಾಗಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ನರಸಿಂಹರಾಜು ಅವರ ಜನ್ಮ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಯುತ್ತಿದೆ. 


ಇದನ್ನೂ ಓದಿ: ನ್ಯಾಯ ಅಂದ್ರೆ ನ್ಯಾಯ...ಹಾಸ್ಟೆಲ್‌ ಹುಡುಗರನ್ನು ಕೆಣಕಿದ ಮೋಹಕತಾರೆಗೆ ಟಾಂಗ್‌ ಕೊಟ್ಟ ರಿಷಬ್‌ ಶೆಟ್ಟಿ..! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.