ರಿಲೀಸ್‌ಗೂ ಮೊದಲೇ ನಾರಾಯಣ ನಾರಾಯಣ ಸಿನಿಮಾದ ತುಳು ರೈಟ್ಸ್ ಮಾರಾಟ⁠

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುವ ಹೊಸ ಪ್ರತಿಭೆಗಳಿಗೇನು ಕಮ್ಮಿ ಇಲ್ಲ. ಅನೇಕ ಕಲಾವಿದರು ತಂತ್ರಜ್ಞರು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.   

Written by - Zee Kannada News Desk | Last Updated : Mar 15, 2025, 02:10 PM IST
  • ಮಜಾ ಟಾಕಿಸ್ ಪವನ್ ಕುಮಾರ್ ನಟನೆಯ ಚಿತ್ರ
  • ನಾರಾಯಣ ನಾರಾಯಣ ಚಿತ್ರದ ಟ್ರೈಲರ್ ರಿಲೀಸ್
  • ನಾರಾಯಣ ನಾರಾಯಣ ಟ್ರೈಲರ್ ನೋಡಿ ಚಿತ್ರಾಭಿಮಾನಿಗಳು ಹೇಳಿದ್ದೇನು?
ರಿಲೀಸ್‌ಗೂ ಮೊದಲೇ ನಾರಾಯಣ ನಾರಾಯಣ ಸಿನಿಮಾದ ತುಳು ರೈಟ್ಸ್ ಮಾರಾಟ⁠

ನಾರಾಯಣ ನಾರಾಯಣ, ಸ್ಯಾಂಡಲ್‌ವುಡ್ ನಲ್ಲಿ ರಿಲೀಸ್‌ಗೆ ತಯಾರಿ ಮಾಡಿಕೊಳ್ಳುತ್ತಿರುವ ಹೊಸಬರ ಸಿನಿಮಾ. ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುವ ಹೊಸ ಪ್ರತಿಭೆಗಳಿಗೇನು ಕಮ್ಮಿ ಇಲ್ಲ. ಅನೇಕ ಕಲಾವಿದರು ತಂತ್ರಜ್ಞರು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೀಗ ನಾರಾಯಣ ನಾರಾಯಣ ಸಿನಿಮಾ ಮೂಲಕ ಅನೇಕ ಹೊಸ ಪ್ರತಿಭೆಗಳ ಎಂಟ್ರಿಯಾಗಿದೆ. ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ಈ ಸಿನಿಮಾಗೆ ಶ್ರೀಕಾಂತ್ ಕೆಂಚಪ್ಪ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಅನೇಕ ಹೊಸ ಕಲಾವಿದರ ಜೊತೆಗೆ ಕಾಮಿಡಿ ನಟ, ಮಜಾ ಟಾಕಿಸ್ ಖ್ಯಾತಿಯ ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. 

Add Zee News as a Preferred Source

ನಾರಾಯಣ ನಾರಾಯಣ ಸಿನಿಮಾತಂಡ ಟ್ರೈಲರ್ ಲಾಂಚ್ ಮಾಡುವ ಮೂಲಕ ಮಾಧ್ಯಮದ ಮುಂದೆ ಹಾಜರಾಗಿತ್ತು. ಸಿನಿಮಾದ ಎರಡು ಹಾಡುಗಳು ಮತ್ತು ಟ್ರೈಲರ್ ಅನ್ನು ರಿಲೀಸ್ ಮಾಡುವ ಮೂಲಕ ಚಿತ್ರಾಭಿಮಾನಿಗಳನ್ನು ಚಿತ್ರಮಂದಿರಕ್ಕೆ ಆಹ್ವಾನ ನೀಡಿದೆ ಚಿತ್ರತಂಡ. 

ಎರಡು ಸುಂದರ ಹಾಡುಗಳು ಗಮನ ಸೆಳೆಯುತ್ತಿವೆ. ಸತ್ಯ ರಾಧಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಕೃಷ್ಣನ ಬಗ್ಗೆ ಇರುವ ಹಾಡು ಹಾಗೂ ಖ್ಯಾತ ಚಿತ್ರಸಾಹಿತಿ ಕವಿರಾಜ್ ಅವರು ಬರೆದಿರುವ ರೊಮ್ಯಾಂಟಿಂಕ್ ಹಾಡು ಕೇಳಲು ಇಂಪಾಗಿದ್ದು ನಾರಾಯಣ ನಾರಾಯಣ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಟ್ರೈಲರ್ ರಿಲೀಸ್ ಮಾಡಿ ಮಾತನಾಡಿದ ಸಿನಿಮಾತಂಡ ನಾಲ್ಕು ವರ್ಷಗಳಿಂದ ಸಿನಿಮಾ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ ಅದ್ಭುತವಾಗಿ ಸಿನಿಮಾ ಮಾಡಿದ್ದೇವೆ ಎಂದರು. ನಾರಾಯಣ ನಾರಾಯಣ ಕೃಷ್ಣಪ್ಪ ಅವರ ನಿರ್ಮಾಣದಲ್ಲಿ ಮೂಡಿಬಂದಿದೆ. 

ಇದನ್ನೂ ಓದಿ: ʼನಾನು ಪುರುಷರಲ್ಲಿ ಬಯಸೋದು ಅದೊಂದನ್ನೇʼ.. ಖ್ಯಾತ ನಟಿಯ ಸೆನ್ಸೇಷನಲ್‌ ಹೇಳಿಕೆ!

ಟ್ರೈಲರ್ ರಿಲೀಸ್ ಬಳಿಕ ಮಾತನಾಡಿದ ನಿರ್ದೇಶಕ ಶ್ರೀಕಾಂತ್, 'ನಾರಾಯಣ ನಾರಾಯಣ ನಾಲ್ಕು ವರ್ಷದ ಶ್ರಮ. ಚಿತ್ರೀಕರಣ ಎಲ್ಲಾ ಮುಗಿಸಿ ರಿಲೀಸ್‌ಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಇಡೀ ತಂಡ ಜೊತೆಯಲ್ಲಿ ನಿಂತಿದೆ' ಎಂದು ಹೇಳಿದರು.

ನಿರ್ಮಾಪಕ ಕೃಷ್ಣಪ್ಪ ಅವರು ಮಾತನಾಡಿ, ಈಗಾಗಲೇ ಎರಡು ಸಿನಿಮಾಗಳನ್ನು ಮಾಡಿ ಚಿತ್ರರಂಗದ ಸಹವಾಸವೇ ಬೇಡ ಅಂತ ಇದ್ದೆ ಆದರೆ ನಿರ್ದೇಶಕ ಶ್ರೀಕಾಂತ್ ಅವರ ಕೃಷ್ಣನ ಕಥೆ ಕೇಳಿ ಇಷ್ಟವಾಯಿತು. ನಾವು ಕೂಡ ಕೃಷ್ಣನ ಭಕ್ತರು. ಹಾಗಾಗಿ ಈ ಸಿನಿಮಾ ಮಾಡಲು ಒಪ್ಪಿಕೊಂಡೆ' ಎಂದು ಹೇಳಿದರು. 

ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕೃಷ್ಣನಾಗಿ ಮಿಂಚಿರುವ ಕಾಮಿಡಿ ನಟ ಮತ್ತು ಮಜಾ ಟಾಕಿಸ್ ಖ್ಯಾತಿಯ ಪವನ್ ಮಾತನಾಡಿ, 'ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಕನ್ನಡ ಸಿನಿಮಾ ಗೆಲ್ಲಿಸಿ. ಓಟಿಟಿ ನಲ್ಲಿ ಸಿನಿಮಾ ಬರುತ್ತೆ ಅಂತಾ ಕಾಯಬೇಡಿ' ಎಂದು ಹೇಳಿದರು.  

ಇನ್ನೂ ಸಿನಿಮಾ ಮತ್ತೊಂದು ವಿಶೇಷ ಎಂದರೆ ನಾರಾಯಣ ನಾರಾಯಣ ಸಿನಿಮಾದ ತುಳು ರೈಟ್ಸ್ ಈಗಾಗಲೇ ಮಾರಾಟವಾಗಿದೆ. ಟ್ರೈಲರ್ ರಿಲೀಸ್ ಈವೆಂಟ್ ನಲ್ಲಿ ನಿರ್ಮಾಪಕ ಕೃಷ್ಣಪ್ಪ ಅವರು ಬಹಿರಂಗ ಪಡಿಸಿ ಸಂತಸ ವ್ಯಕ್ತಪಡಿಸಿದರು. 

ಚಿತ್ರದಲ್ಲಿ ಗುರುಕಿರಣ್, ನಾಯಕಿಯಾಕಿ ಬಿಂಬಿಕಾ, ಕೀರ್ತಿ ಕೃಷ್ಣ, ದರ್ಶನ್ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ..

ಈ ಸಿನಿಮಾದ ವಿತರಣೆ ಹಕ್ಕನ್ನು ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್ ಅವರು ಪಡೆದುಕೊಂಡಿದ್ದಾರೆ. ಒಟ್ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ನಾರಾಯಣ ನಾರಾಯಣ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.

ಇದನ್ನೂ ಓದಿ: ವಿಚ್ಛೇದನದ ಹಾದಿಯಲ್ಲಿ ಮತ್ತೊಂದು ಸ್ಟಾರ್ ಜೋಡಿ! ಹಾಲು ಜೇನಿನಂತಿದ್ದ ಸಂಸಾರದಲ್ಲಿ ಏಕಾಏಕಿ ಡಿವೋರ್ಸ್‌ ಬಿರುಗಾಳಿ..

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News