Matte Maduve First look : ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ‘ಮತ್ತೆ ಮದುವೆ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ.  ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ. 


ಇದನ್ನೂ ಓದಿ : ವೀಕೆಂಡ್ ವಿಥ್ ರಮೇಶ್ ಸೀಸನ್ 5 ಮೊದಲ ಗೆಸ್ಟ್ ಮೋಹಕ ತಾರೆ ರಮ್ಯಾ.. ಫ್ಯಾನ್ಸ್ ಫುಲ್ ಹ್ಯಾಪಿ!


‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ. 


ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.


ಇದನ್ನೂ ಓದಿ : ಸ್ಮೃತಿ ಇರಾನಿ 25 ವರ್ಷದ ಹಿಂದೆ ಹೇಗಿದ್ದರು ನೋಡಿ.. ಮಿಸ್ ಇಂಡಿಯಾ ಫೈನಲ್ ವಿಡಿಯೋ ವೈರಲ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.