ಬೆಂಗಳೂರು : ಸೀರಿಯಲ್ ಪ್ರಿಯರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೊಚ್ಚ ಹೊಸ ಧಾರಾವಾಹಿಯೊಂದು ಹೊಸ ಕಥೆಯೊಂದಿಗೆ ಮನೆ ಮಂದಿಗೆಲ್ಲ ಮನರಂಜನೆ ನೀಡಲು ರೆಡಿಯಾಗಿದೆ. ಕಲರ್ಸ್ ಕನ್ನಡದಲ್ಲಿ ಭಾಗ್ಯಲಕ್ಷ್ಮೀ ಎಂಬ ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಈಗಾಗಲೇ ಪ್ರೋಮೋ ಮೂಲಕ ಗಮನ ಸೆಳೆಡಿರುವ ಭಾಗ್ಯಲಕ್ಷ್ಮೀ ಧಾರಾವಾಹಿ ಅಕ್ಟೋಬರ್ 10ರಿಂದ  ಪ್ರಸಾರವಾಗಲಿದೆ. 


COMMERCIAL BREAK
SCROLL TO CONTINUE READING

ಈಗಾಗಲೇ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳ  ಪಟ್ಟಿಗೆ ಭಾಗ್ಯಲಕ್ಷ್ಮೀ ಧಾರಾವಾಹಿ ಕೂಡ ಸೇಪರ್ಡೆಗೊಳ್ಳಲಿದೆ. ಅಕ್ಟೋಬರ್ 10ರಿಂದ ಸಂಜೆ 7 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿ ದೊಡ್ಡ ತಾರಾಬಳಗವನ್ನೇ ಹೊಂದಿದೆ. 


ಇದನ್ನೂ ಓದಿ : Adipurush Teaser: ಟ್ರೋಲ್‌ ಆದ ಆದಿಪುರುಷ.! ಇದಕ್ಕಿಂತ ಛೋಟಾ ಭೀಮ್‌ ಬೆಟರ್‌ ಎಂದ ಫ್ಯಾನ್ಸ್‌.!


ಅಕ್ಕತಂಗಿಯ ಬಾಂದವ್ಯದ ಕಥೆ ಹೊಂದಿರುವ ಈ ಧಾರಾವಾಹಿಯಲ್ಲಿ ನಿರೂಪಕಿ ಸುಷ್ಮಾ ಕಥಾ ನಾಯಕಿಯಾಗಿ  ನಟಿಸುತ್ತಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶಮಂತ್ ಗೌಡ, ಸುದರ್ಶನ್, ಪದ್ಮಜಾ ರಾವ್, ಭೂಮಿಕ, ತಾಂಡವ ಸೂರ್ಯವಂಶಿ  ತಾರಾಬಳಗದಲ್ಲಿದ್ದಾರೆ. ಈ ಧಾರಾವಾಹಿ ಮೂಲಕ ಬಿಗ್ ಬಾಸ್ ಬ್ರೋ ಗೌಡ ಇದೇ ಮೊದಲ ಬಾರಿಗೆ ಸೀರಿಯಲ್ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿರುವ ಜೈ ಮಾತಾ ಕಂಬೈನ್ಸ್ ಭಾಗ್ಯಲಕ್ಷ್ಮೀ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ.


ಧಾರವಾಹಿಯಲ್ಲಿನ ತನ್ನ ಪಾತ್ರದ ಬಗ್ಗೆ ಮಾತನಾಡಿರುವ ಸುಷ್ಮಾ, ತಮ್ಮ ಪಾತ್ರದ ಬಗ್ಗೆ ವಿವರಿಸಿದ್ದಾರೆ. ತನ್ನ ಪ್ರೀತಿಯ ತಂಗಿಗೆ ಒಳ್ಳೆಯ ವರನನ್ನು ನೋಡಿ ಆಕೆಯನ್ನು ಮದುವೆ ಮಾಡಬೇಕು ಆಕೆ ಖುಷಿಯಿಂದ ಇರಬೇಕು ಎಂಬ ಉದ್ದೇಶ ಇರುವ ಪಾತ್ರ ನನ್ನದು ಎಂದು 
ವರ್ಣಿಸಿದ್ದಾರೆ. 


ಇದನ್ನೂ ಓದಿ: ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ಸಿಎಂ ಗೆ ನಟ ಝೈದ್ ಖಾನ್ ಮನವಿ


ಹಿರಿಯ ಕಲಾವಿದೆ ಪದ್ಮಜಾ ರಾವ್ ಮಾತನಾಡಿ, ಈ ಧಾರಾವಾಹಿಯಲ್ಲಿ ನನ್ನದು ಅತ್ತೆ ಪಾತ್ರ. ಇಲ್ಲಿ ನಾನು ಗಟ್ಟಿಗಿತ್ತಿಯಾದ ಅತ್ತೆ ಪಾತ್ರ ನಿರ್ವಹಿಸುತ್ತಿದ್ದೇನೆ. ಜೋರು ಮಾಡುವ, ಗದರುವ ಪಾತ್ರ ನನ್ನದು. ಇಲ್ಲಿವರೆಗೂ ಸಾಪ್ಟ್ ಕ್ಯಾರೆಕ್ಟರ್ ಮಾಡಿದ್ದ ನನಗೂ ಬದಲಾವಣೆ ಬೇಕಿತ್ತು ಈ ಪಾತ್ರ ತುಂಬಾ ಸ್ಟ್ರಾಂಗ್ ಆಗಿದೆ ಎಂದಿದ್ದಾರೆ. 



 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.