"ನಿದ್ರಾದೇವಿ Next Door" ಚಿತ್ರದ "ಸ್ಲೀಪ್​​ ಲೆಸ್ ಆಂಥೆಮ್" ಹಾಡಿಗೆ ಪ್ರೇಕ್ಷಕರು ಫಿದಾ..!

Nidradevi next door movie : ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನದ "ನಿದ್ರಾದೇವಿ next door" ಚಿತ್ರದ "ಸ್ಲೀಪ್ ಲೆಸ್ ಆಂಥೆಮ್" ಹಾಡನ್ನು ಇತ್ತೀಚೆಗೆ ದುನಿಯಾ ವಿಜಯ್ ಕುಮಾರ್ ಅವರು ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದರು. 

Written by - Krishna N K | Last Updated : Jun 4, 2025, 09:59 PM IST
    • ಸುರಾಗ್ ನಿರ್ದೇಶನದ "ನಿದ್ರಾದೇವಿ next door" ಚಿತ್ರ
    • "ನಿದ್ರಾದೇವಿ next door" ಚಿತ್ರದ "ಸ್ಲೀಪ್ ಲೆಸ್ ಆಂಥೆಮ್" ಸಾಂಗ್‌
    • ಸಾಂಗ್‌ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ದುನಿಯಾ ವಿಜಯ್
"ನಿದ್ರಾದೇವಿ Next Door" ಚಿತ್ರದ "ಸ್ಲೀಪ್​​ ಲೆಸ್ ಆಂಥೆಮ್" ಹಾಡಿಗೆ ಪ್ರೇಕ್ಷಕರು ಫಿದಾ..!

Entertainment News : ಬಿಡುಗಡೆಯಾದ ಕ್ಷಣದಿಂದಲೇ ನಿದ್ದೆ ಬಾರದ ಹಾಡಿಗೆ ಮೆಚ್ಚುಗೆ ವ್ಯಕ್ತಿಯ ಪಜೀತಿಯ ಕುರಿತಾದ ಈ ಹಾಡಿಗೆ‌ ಅಪಾರ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. "ಸರಿಗಮ" ದಲ್ಲೂ ಈ ಹಾಡು ಭಾರೀ ಟ್ರೆಂಡಿಂಗ್ ನಲ್ಲಿದ್ದು, ಸಾಮಾಜಿಕ ಜಾಲತಾಣಗಳಲ್ಲೂ "ಸ್ಲೀಪ್ ಲೆಸ್ ಆಂಥೆಮ್" ಸಖತ್ ಸದ್ದು ಮಾಡುತ್ತಿದೆ. ಅಧಿಕ ಸಂಖ್ಯೆಯಲ್ಲಿ ಯುವಜನತೆ ಈ ಹಾಡಿಗೆ ಹುಕ್ ಸ್ಟೆಪ್ ಹಾಕುತ್ತಿರುವುದು  ಹಾಡಿನ ಜನಪ್ರಿಯತೆಗೆ ಸಾಕ್ಷಿಯಾಗಿದೆ. 

Add Zee News as a Preferred Source

Rap ಶೈಲಿಯ ಈ ಗೀತೆಗೆ ಗುಬ್ಬಿ ಮತ್ತು ಸೈಫ್ ಖಾನ್ ಸಾಹಿತ್ಯ ಬರೆದು ಹಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನವಿರುವ "ಸ್ಲಿಪ್ ಲೆಸ್ ಆಂಥೆಮ್" ಸಾಂಗ್​​ಗೆ ನಾಯಕ ಪ್ರವೀರ್ ಶೆಟ್ಟಿ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ನಿರ್ದೇಶಕ ಸುರಾಗ್ ಅವರ ಪತ್ನಿ ಸಹನ ರಾಮಸ್ವಾಮಿ ಅವರು ಸಹ‌ ನಿರ್ದೇಶಕರಾಗಿ ಸಾಥ್ ಕೊಟ್ಟಿದ್ದಾರೆ. ಭರತ್ ಪರಶುರಾಮ್ ಕ್ಯಾಮರಾ ಹಿಡಿದಿದ್ದಾರೆ.

ಇದನ್ನೂ ಓದಿ:ಆರ್‌ಸಿಬಿ ಸಂಭ್ರಮದ ವೇಳೆ ಕಾಲ್ತುಳಿತ : ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ

ನಿದ್ರಾದೇವಿ next door ಸಿನಿಮಾದಲ್ಲಿ ಪ್ರವೀರ್ ಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸ, ಅನೂಪ್, ಐಶ್ವರ್ಯಾ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.

ನಿರ್ಮಾಪಕ ಜಯರಾಮ ದೇವಸಮುದ್ರ ಅವರು ಈ ಹಿಂದೆ ಇದೇ ಬ್ಯಾನರ್ ನಲ್ಲಿ  "ರೇವ್ ಪಾರ್ಟಿ" ಮತ್ತು "ಎಂಗೇಜ್ಮೆಂಟ್" ಚಿತ್ರಗಳನ್ನು ನಿರ್ಮಿಸಿದ್ದರು. ನಕುಲ್ ಅಭಯಂಕರ್ ಅವರ ಸಂಗೀತ ನಿರ್ದೇಶನವಿರುವ ಬಹು ನಿರೀಕ್ಷಿತ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಛಾಯಾಗ್ರಹಣ, ಉಲ್ಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮತ್ತು ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News