ಸೋತು ರಾಜಕೀಯದಿಂದ ಹೊರ ಬಂದಿಲ್ಲ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ..!

Nikhil kumaraswamy : ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ. ಚುನಾವಣೆಯ ಸೋಲು ತಾತ್ಕಾಲಿಕ. ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ ಎಂದು ನಟ ನಿಖಿಲ್‌ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

Written by - Krishna N K | Last Updated : Aug 30, 2023, 06:18 PM IST
  • ವಿಧಾನಸಭೆ ಚುನಾವಣೆ ಸೋಲಿನ ಬಳಿಕ ನಿಖಿಲ್‌ ಕುಮಾರಸ್ವಾಮಿಯವರು ಚಿತ್ರರಂಗದತ್ತ ಮುಖ
  • ಸೋತು ರಾಜಕೀಯದಿಂದ ಹೊರ ಬಂದಿಲ್ಲ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ.
  • ವದಂತಿಗೆ ಸುದೀರ್ಘ ಬರಹದ ಮೂಲಕ ಸ್ಪಷ್ಟತೆ ನೀಡಿದ ನಟ, ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿ.
ಸೋತು ರಾಜಕೀಯದಿಂದ ಹೊರ ಬಂದಿಲ್ಲ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ..! title=

Nikhil kumaraswamy movie : ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ನಟ, ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿಯವರು ಚಿತ್ರರಂಗದತ್ತ ಮುಖ ಮಾಡಿದ್ದಾರೆ ಎನ್ನುವ ಸುದ್ದಿ ಕುರಿತು ಸ್ವತಃ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆಯ ಸೋಲು ತಾತ್ಕಾಲಿಕ. ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಸ್ಪಷ್ಟತೆ ನೀಡಿರುವ ನಿಖಿಲ್‌ ಕುಮಾರಸ್ವಾಮಿ, ಆರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ.

ಇದನ್ನೂ ಓದಿ: ಮುದ್ದು ಮುದ್ದಾಗಿ ರಕ್ಷಾ ಬಂಧನ ಆಚರಿಸಿದ ರಿಷಬ್‌ ಶೆಟ್ಟಿ ಮಕ್ಕಳು..! ಫೋಟೋಸ್‌ ನೋಡಿ

ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ. ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ. 

 

ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ. 

ಇದನ್ನೂ ಓದಿ: ʼಜವಾನ್ʼ ಯಶಸ್ಸಿಗಾಗಿ ಮಾತಾ ವೈಷ್ಣೋದೇವಿಗೆ ಮೊರೆ ಹೋದ ಶಾರುಖ್ ಖಾನ್..!

ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ.. ಎಂದು ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News