ನಿಖಿಲ್ ಸಿದ್ಧಾರ್ಥ್ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..!

Written by - Malathesha M | Edited by - Manjunath N | Last Updated : Apr 18, 2022, 08:14 PM IST
  • Spy ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿದೆ.
  • ಕೈಯಲ್ಲಿ ಗನ್ ಹಿಡಿದು ಸಖತ್ ಸ್ಟೈಲೀಶ್ ಲುಕ್‌ನಲ್ಲಿ ನಿಖಿಲ್ ಸಿದ್ಧಾರ್ಥ್ ಮಿಂಚಿದ್ದಾರೆ.
ನಿಖಿಲ್ ಸಿದ್ಧಾರ್ಥ್ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..! title=
Photo Courtesy: Twitter

ಟಾಲಿವುಡ್ ಹ್ಯಾಂಡ್ಸಮ್ ಹಂಕ್, ಪ್ರಾಮಿಸಿಂಗ್ ಹೀರೋ ನಿಖಿಲ್ ಸಿದ್ಧಾರ್ಥ್ ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ನಿಖಿಲ್ 19ನೇ ಸಿನಿಮಾಗೆ ಖ್ಯಾತ ನಿರ್ದೇಶಕ‌ ಕಮ್‌ ಸಂಕಲನಕಾರ ಗ್ಯಾರಿ ಬಿ.ಎಚ್. ಆಕ್ಷನ್ ಕಟ್ ಹೇಳಿದ್ದು, ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ.

ಇದನ್ನೂ ಓದಿ: ವಿಶ್ವದ ಬಾಕ್ಸ್ ಆಫೀಸ್ ನಲ್ಲಿ ಕೆಜಿಎಫ್ 2 ಗೆ ಎರಡನೇ ಸ್ಥಾನ..! ಫ್ರೀ ಟಿಕೆಟ್ ಘೋಷಿಸಿದ ಈ ಕಂಪನಿ..!

SPY ಫಸ್ಟ್ ಲುಕ್ ರಿಲೀಸ್

Spy ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿದೆ. ಕೈಯಲ್ಲಿ ಗನ್ ಹಿಡಿದು ಸಖತ್ ಸ್ಟೈಲೀಶ್ ಲುಕ್‌ನಲ್ಲಿ ನಿಖಿಲ್ ಸಿದ್ಧಾರ್ಥ್ ಮಿಂಚಿದ್ದಾರೆ.ಸ್ಪೈ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿದೆ. ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ದಸರಾ ಹಬ್ಬಕ್ಕೆ ಸ್ಪೈ ಸಿನಿಮಾ ಥಿಯೇಟರ್‌ಗೆ ಎಂಟ್ರಿ‌ ಕೊಡಲಿದೆ

.

ಇದನ್ನೂ ಓದಿ: KGF Chapter 3: ಕೆಜಿಎಫ್ ಚಾಪ್ಟರ್ 3 ಚಿತ್ರದ ಪ್ರೀ ಪ್ರೊಡಕ್ಷನ್ ಕಾರ್ಯಕ್ಕೆ ಚಾಲನೆ...!

ಸ್ಪೈ ಸಿನಿಮಾಗೆ ರಾಜಶೇಖರ್ ರೆಡ್ಡಿ  ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಾಯಕಿಯಾಗಿ ನಟಿಸಲಿದ್ದಾರೆ.

ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಈ ಸಿನಿಮಾ ಜೊತೆಗೆ ED ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಮತ್ತೆರಡು ಹೊಸ ಪ್ರಾಜೆಕ್ಟ್ ತಯಾರಾಗಲಿದ್ದು, ಡಿಜೆ ಟಿಲ್ಲು ಖ್ಯಾತಿಯ ನಿರ್ದೇಶಕ ವಿಮಲ್ ಕೃಷ್ಣ ನಿರ್ದೇಶನಲ್ಲೊಂದು ಸಿನಿಮಾ ಬರಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News