'Supplier ಶಂಕರ' ಅವತಾರದಲ್ಲಿ ಗಂಟುಮೂಟೆ ಹೀರೋ ʼನಿಶ್ಚಿತ್ ಕೊರೋಡಿʼ..!

Nischith Korodi : ಭರವಸೆ ಮೂಡಿಸಿರುವ ನಟ ನಿಶ್ಚಿತ್ ಕೊರೋಡಿ Supplier ಶಂಕರ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Written by - Krishna N K | Last Updated : Aug 19, 2023, 01:13 PM IST
  • ʼSupplier ಶಂಕರʼ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.
  • ಮೋಷನ್ ಪೋಸ್ಟರ್ ನಾನಾ ಕುತೂಹಲವನ್ನು ಹುಟ್ಟುಹಾಕಿದೆ.
  • ನಿಶ್ಚಿತ್ ಕೊರೋಡಿ Supplier ಶಂಕರ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ.
'Supplier ಶಂಕರ' ಅವತಾರದಲ್ಲಿ ಗಂಟುಮೂಟೆ ಹೀರೋ ʼನಿಶ್ಚಿತ್ ಕೊರೋಡಿʼ..! title=

Supplier Shankar : ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ʼSupplier ಶಂಕರʼ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಪೊಲೀಸ್ ಸ್ಟೇಷನ್‌ ದೃಶ್ಯದ ಮೂಲಕ ತೆರೆದುಕೊಳ್ಳುವ ಮೋಷನ್ ಪೋಸ್ಟರ್ ನಾನಾ ಕುತೂಹಲವನ್ನು ಹುಟ್ಟುಹಾಕಿದೆ. ರಕ್ತಸಿಕ್ತವಾಗಿ ಮಾಸ್ ಲುಕ್‌ನಲ್ಲಿ ನಿಶ್ಚಿತ್‌ ಕಾಣಿಸಿಕೊಂಡಿದ್ದಾರೆ.

ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಿಶ್ಚಿತ್ ಕೊರೋಡಿ Supplier ಶಂಕರ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ ಸಿಎಂ ಜೊತೆ ʼಜೈಲರ್‌ʼ ಸಿನಿಮಾ ವೀಕ್ಷಿಸಲಿರುವ ತಲೈವಾ..!

ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಟೈಟಲ್ ಹೇಳುವಂತೆ ಒಬ್ಬ ಬಾರ್ Supplier ಸುತ್ತಾ ಇಡೀ ಸಿನಿಮಾ ಸಾಗುತ್ತದೆ. ನಿಶ್ಚಿತ್ ಗೆ ಜೋಡಿಯಾಗಿ ಲಗೋರಿ ಸಿನಿಮಾ ಖ್ಯಾತಿಯ ದೀಪಿಕಾ ಆರಾಧ್ಯ ನಟಿಸಿದ್ದು, ಗೋಪಾಲ ಕೃಷ್ಣ ದೇಶಪಾಂಡೇ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ.

Supplier ಶಂಕರ ಸಿನಿಮಾಗೆ ರಂಜಿತ್, ಕಥೆ , ಚಿತ್ರಕಥೆ, ಸಂಭಾಷಣೆ ಜೊತೆಗೆ ಸಾಹಿತ್ಯದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದು, ರವಿ ಬಸ್ರೂರ್ ಬಳಿ ಕೆಲಸ ಮಾಡಿರುವ ಆರ್.ಬಿ.ಭರತ್ ಸಂಗೀತ ನೀಡಿದ್ದಾರೆ. ಸತೀಶ್ ಚಂದ್ರಯ್ಯ ಸಂಕಲನ, ಸತೀಶ್ ಕುಮಾರ್.ಎ ಛಾಯಾಗ್ರಹಣ, ಬಾಲಾಜಿ ಕಲಾ ನಿರ್ದೇಶನ Supplier ಶಂಕರ್ ಸಿನಿಮಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News