ಸೆಟ್ಟೇರಿತು ನಿವೇದಿತಾ ಚೊಚ್ಚಲ ಸಿನಿಮಾ ʼಫೈರ್ ಫ್ಲೈʼ : ಮಗಳ ಚಿತ್ರಕ್ಕೆ ಶಿವಣ್ಣ ದಂಪತಿ ಹಾರೈಕೆ 

Nivedita Shivarajkumar Movie : ನಟ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ತಿಳಿಸಿದ್ದು, ಇದೀಗ ಫೈರ್‌ ಫ್ಲೈ ಎಂಬ ಶೀರ್ಷಿಕೆ ಅನಾವರಣಗೊಳಿಸಿದೆ.

Written by - YASHODHA POOJARI | Last Updated : Jun 15, 2023, 02:16 PM IST
  • ನಿವೇದಿತಾ ನಿರ್ಮಾಣದ ಚಿತ್ರಕ್ಕೆ ಫೈರ್ ಫ್ಲೈ ಟೈಟಲ್ ಫಿಕ್ಸ್ .
  • ನಟ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ.
  • ಈ ಚಿತ್ರಕ್ಕೆ ವಂಶಿ ಹೀರೋ. ನಿರ್ದೇಶನ ಕೂಡ ಅವರದ್ದೇ.
ಸೆಟ್ಟೇರಿತು ನಿವೇದಿತಾ ಚೊಚ್ಚಲ ಸಿನಿಮಾ ʼಫೈರ್ ಫ್ಲೈʼ : ಮಗಳ ಚಿತ್ರಕ್ಕೆ ಶಿವಣ್ಣ ದಂಪತಿ ಹಾರೈಕೆ  title=

Fire fly kannada movie : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ ನಡಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸರಳವಾಗಿ ಮುಹೂರ್ತ ನೆರವೇರಿದ್ದು, ಶಿವರಾಜ್ ಕುಮಾರ್ ದಂಪತಿ ಮಗಳ ಚೊಚ್ಚಲ ನಿರ್ಮಾಣ ಸಿನಿಮಾಗೆ ಶುಭ ಹಾರೈಸಿದರು.

ನಿವೇದಿತಾ ನಿರ್ಮಾಣದ ಚಿತ್ರಕ್ಕೆ ಫೈರ್ ಫ್ಲೈ ಟೈಟಲ್ ಫಿಕ್ಸ್ : ನವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ ರಿವೀಲ್ ಮಾಡಲಾಗಿದೆ. ನಿವೇದಿತಾ ಮೊದಲ ಹೆಜ್ಜೆಗೆ ಫೈರ್ ಫ್ಲೈ ಎಂಬ ಕ್ಯಾಚಿ ಟೈಟಲ್ ಹೆಸರಿಡಲಾಗಿದೆ. ಅಂದಹಾಗೇ ಈ ಚಿತ್ರಕ್ಕೆ ವಂಶಿ ಹೀರೋ. ನಿರ್ದೇಶನ ಕೂಡ ಅವರದ್ದೇ.

ಇದನ್ನು ಓದಿ: ಭಟ್ಟರ ʼಗರಡಿʼಗೆ ಸೊಂಟ ಬಳುಕಿಸುತ್ತಾ ಬಂದ ನಿಶ್ವಿಕಾ ನಾಯ್ಡು..! ʼಹೊಡಿರಲೆ ಹಲಗಿʼ

‘ಪಿಆರ್‌ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ವಂಶಿ, ಇತ್ತೀಚೆಗೆ ‘ಪೆಂಟಗನ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಈಗ ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಶಿವಣ್ಣ ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾರೆ. ಅದೇ ರೀತಿ ನಿವೇದಿತಾ ಶಿವರಾಜ್ಕುಮಾರ್ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News