ಬೆಂಗಳೂರು: ನಟ ದುನಿಯಾ ವಿಜಿ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಮೊದಲ ಪತ್ನಿ ನಾಗರತ್ನ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕೀರ್ತಿಗೌಡ ಗಿರಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ ಬೆನ್ನಲ್ಲೇ ಇದೀಗ ನಾಗರತ್ನ ವಿರುದ್ಧ ಮತ್ತೊಂದು ಜಾಮೀನು ರಹಿತ ದೂರು ದಾಖಲಾಗಿದೆ. 


COMMERCIAL BREAK
SCROLL TO CONTINUE READING

ಕೀರ್ತಿಗೌಡ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ​392(ರಾಬರಿ), 279(ಕಳ್ಳತನ), 307(ಕೊಲೆ ಯತ್ನ), 355(ಚಪ್ಪಲಿ ಏಟು) ಹಾಗೂ 201(ಸಾಕ್ಷಿ ನಾಶ) ಅಡಿಯಲ್ಲಿ ನಾಗರತ್ನ ವಿರುದ್ಧ ದೂರು ದಾಖಲಿಸಲಾಗಿತ್ತು. ಆದರೀಗ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಮತ್ತೊಂದು ಎಫ್‍ಐಆರ್ ದಾಖಲಾಗಿದೆ. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಎಫ್‍ಐಆರ್ ದಾಖಲು ಮಾಡಲಾಗಿದೆ.


ಒಮ್ಮೆ ಎಫ್‍ಐಆರ್ ದಾಖಲಾದ ನಂತರ ಹೆಚ್ಚುವರಿ ಸೆಕ್ಷನ್ ಸೇರಿಸಲು ಕೋರ್ಟ್ ಒಪ್ಪಿಗೆಯನ್ನು ಪಡೆಯಬೇಕು. ಈಗಾಗಲೇ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 326 ಸೆಕ್ಷನ್ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದು, ಈ ಬಗ್ಗೆ ಕೋರ್ಟ್ ಗೆ ಪೊಲೀಸರು ಮನವಿ ಮಾಡಿದ್ದು, ಕಾನೂನಿನ ಮೂಲಕ ತನಿಖೆಗೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. 


ಎಫ್‍ಐಆರ್ ದಾಖಲಾದ ಹಿನ್ನೆಲೆಯಲ್ಲಿ ನಾಗರತ್ನ ಜೈಲಿಗೆ ಹೋಗಲೇಬೇಕಾದ ಸನ್ನಿವೇಶ ಎದುರಾಗಿದೆ.