ನವದೆಹಲಿ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಇದರಿಂದಾಗಿ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹಿರಣ್ಯ ಸಿನಿಮಾದಲ್ಲಿ ದಿವ್ಯಾ ಸುರೇಶ್...ಸ್ಪೆಷಲ್ ರೋಲ್ ನಲ್ಲಿ ಮಿಂಚಲಿದ್ದಾರೆ ಬಿಗ್ ಬಾಸ್ ಚೆಲುವೆ
 
ಸುದ್ದಿ ಪೋರ್ಟಲ್‌ನ ವರದಿಯ ಪ್ರಕಾರ, ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಾಜರಾಗಲು ವಿಫಲವಾದ ಕಾರಣ ಈ ವಾರೆಂಟ್ (Non bailable warrant) ಹೊರಡಿಸಲಾಗಿದೆ. 


ಮೊರಾದಾಬಾದ್‌ನ ಕಟ್ಘರ್ ಪೊಲೀಸ್ ಠಾಣೆಯ ನಿವಾಸಿಯಾಗಿರುವ ಈವೆಂಟ್ ಆಯೋಜಕ ಪ್ರಮೋದ್ ಶರ್ಮಾ ಅವರು, ನಟಿ ಸೋನಾಕ್ಷಿ (Sonakshi) ಅವರನ್ನು ಕಾರ್ಯಕ್ರಮವೊಂದಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ. ಆದರೆ ನಟಿ ಈವೆಂಟ್‌ಗೆ ಹಾಜರಾಗಲು ವಿಫಲರಾದರು. ನಂತರ ಈವೆಂಟ್ ಆಯೋಜಕರು ತಮ್ಮ ಹಣವನ್ನು ಹಿಂತಿರುಗಿಸುವಂತೆ ಕೇಳಿದ್ದಾರೆ.


 


Fraud case) ದೂರು ದಾಖಲಿಸಲಾಗಿದೆ ಎಂದು ಹೇಳಲಾಗಿದೆ.


ಇದನ್ನೂ ಓದಿ: Gangubai Kathiawadi Box Office : ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ಬಾಚಿದ 'ಗಂಗೂಬಾಯಿ ಕಾಠಿವಾಡಿ' ಸಿನಿಮಾ!


ಈ ವಿಚಾರದಲ್ಲಿ ಹೇಳಿಕೆ ನೀಡಲು ಸೋನಾಕ್ಷಿ ಮೊರಾದಾಬಾದ್‌ಗೆ ತೆರಳಿದ್ದರು ಎನ್ನಲಾಗಿದೆ. ಆದರೆ, ವಂಚನೆ ಪ್ರಕರಣದಲ್ಲಿ ಬಾಲಿವುಡ್ ತಾರೆ ನಿರಂತರ ಗೈರು ಹಾಜರಾಗಿದ್ದರಿಂದ ನ್ಯಾಯಾಲಯ ಇದೀಗ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.