Yuzvendra Chahal met NTR : ಆರ್‌ಆರ್‌ಆರ್‌ ಸಿನಿಮಾ ಅಶ್ವಮೇಧದ ಕುದುರೆಯಂತೆ ಒಂದರ ಮೇಲೊಂದು ದಾಖಲೆ ಬರೆಯುತ್ತ ಸಾಗುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ರಾಜಮೌಳಿ ನಿರ್ದೇಶನದ ಚಿತ್ರ ಇತ್ತೀಚೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದುಕೊಂಡು ಇತಿಹಾಸ ಸೃಷ್ಟಿಸಿತು. ಅತ್ಯುತ್ತಮ ಒರಿಜಿನಲ್‌ ಹಾಡಿಗಾಗಿ ಈ ಪ್ರಶಸ್ತಿ ಬಂದಿತ್ತು. ನಾಟು ನಾಟು ಹಾಡಿಗೆ ಸಂಗೀತ ನೀಡಿದ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ತಂಡದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.


COMMERCIAL BREAK
SCROLL TO CONTINUE READING

ಇತ್ತೀಚೆಗೆ, ನಟ ಜೂನಿಯರ್ ಎನ್‌ಟಿಆರ್‌ ಭಾರತೀಯ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರನ್ನು ಭೇಟಿಯಾದರು. ಇಬ್ಬರೂ ಒಟ್ಟಿಗೆ ಕ್ಯಾಮರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಫೋಟೋವನ್ನು ಯುಜುವೇಂದ್ರ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ʼಮ್ಯಾನ್‌ ಅಪ್‌ ಮಾಸ್‌ ಜೂ.ಎನ್‌ಟಿಆರ್ ಅವರನ್ನು ಭೇಟಿಯಾಗಿದ್ದು, ನಿಜಕ್ಕೂ ಸಂತೋಷ ತಂದಿದೆ. ಸರಳ ವ್ಯಕ್ತತ್ವ. ಗೋಲ್ಡನ್ ಗ್ಲೋಬ್ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ನಾವೆಲ್ಲರೂ ಹೆಮ್ಮೆಪಡುತ್ತೇವೆ" ಎಂದು ಶೀರ್ಷಿಕೆ ಬರೆದುಕೊಂಡಿದ್ದರು.


ಕರಾವಳಿ ಕನ್ಯೆ ಸಮೃದ್ದಿ ವಿ. ಶೆಟ್ಟಿ ಮುಡಿಗೆ ಮಿಸ್ ಕ್ವೀನ್ ಆಫ್ ಇಂಡಿಯಾ ಕಿರೀಟ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.