Nuru Janmakoo: ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ.


COMMERCIAL BREAK
SCROLL TO CONTINUE READING

ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕತೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ. ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.


ಧಾರಾವಾಹಿಯ ಕತೆಯನ್ನು ಚಿಕ್ಕಮಗಳೂರಿನ ಚೆಂದದ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗಿದ್ದು, ‘ನೂರು ಜನ್ಮಕೂ’ ಮಾನವೀಯ ಅಂತಃಕರಣ ಹಾಗೂ ಅತಿಮಾನುಷ ಶಕ್ತಿಗಳ ಅಟ್ಟಹಾಸವನ್ನು ಮುಖಾಮುಖಿಯಾಗಿಸುತ್ತದೆ. ಹಾಗಾಗಿ ರೋಚಕ ತಿರುವುಗಳನ್ನು ಪಡೆಯುತ್ತಾ ವೀಕ್ಷಕರನ್ನು ರಂಜಿಸುತ್ತದೆ. ಸಂಬಂಧಗಳು, ಕುಟುಂಬ ನಾಟಕಗಳು ಅದನ್ನು ಮತ್ತಷ್ಟು ರಸವತ್ತಾಗಿಸುತ್ತವೆ.


ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟನಟಿಯರ ದಂಡೇ ಇದೆ. ‘ಗೀತಾ’ ಧಾರಾವಾಹಿಯಿಂದ ಹೆಸರಾದ ಧನುಷ್ ಗೌಡ, ಹಿರಿಯ ನಟಿ ಗಿರಿಜಾ ಲೋಕೇಶ್, ಭಾಗ್ಯಶ್ರೀ, ಬಿ ಎಂ ವೆಂಕಟೇಶ್ ಮತ್ತು ಗಾಯಕಿ ಅರ್ಚನಾ ಉಡುಪ ಪಾತ್ರವರ್ಗದಲ್ಲಿದ್ದಾರೆ. ಜೊತೆಗೆ ಮಜಾ ಟಾಕೀಸ್ ಖ್ಯಾತಿಯ ರೆಮೋ ಕೂಡ ಇದ್ದಾರೆ. ಚಿತ್ರಾ ಶೆಣೈ ತಮ್ಮ ಗುಡ್ ಕಂಪನಿ ಸಂಸ್ಥೆಯಿಂದ ‘ನೂರು ಜನ್ಮಕೂ’ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ.


ಟಿವಿ ಧಾರಾವಾಹಿಗಳ ಪ್ರೇಮಕತೆಗಳ ಸ್ವರೂಪವನ್ನೇ ಬದಲಾಯಿಸಲು ಸಜ್ಜಾಗಿರುವ “ನೂರು ಜನ್ಮಕೂ’ ದ ಮೊದಲ ಸಂಚಿಕೆಯನ್ನು ತಪ್ಪಿಸಿಕೊಳ್ಳಬೇಡಿ. ಕಲರ್ಸ್ ಕನ್ನಡ ಒಂದು ಕುಟುಂಬ ಮನರಂಜನಾ ಚಾನಲ್ ಆಗಿದ್ದು, ಕನ್ನಡದ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಗುಣಮಟ್ಟದ ಕಾರ್ಯಕ್ರಮಗಳನ್ನು ವೀಕ್ಷಕರಿಗೆ ಒದಗಿಸುತ್ತದೆ. ಭಾಗ್ಯಲಕ್ಷ್ಮಿ, ಲಕ್ಷ್ಮೀ ಬಾರಮ್ಮ, ರಾಮಚಾರಿ, ನಿನಗಾಗಿ, ದೃಷ್ಟಿಬೊಟ್ಟು, ಕರಿಮಣಿ, ಶ್ರೀಗೌರಿ, ಗಿಚ್ಚಿ-ಗಿಳಿಗಿಳಿ, ರಾಜಾ-ರಾಣಿ, ನನ್ನಮ್ಮ ಸೂಪರ್‌ಸ್ಟಾರ್, ಫ್ಯಾಮಿಲಿ ಗ್ಯಾಂಗ್‌ಸ್ಟಾರ್ಸ್ ಮತ್ತು ಬಿಗ್ ಬಾಸ್ ಕನ್ನಡ ಚಾನಲ್‌ನ ಅತ್ಯಂತ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕೆಲವು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.