ಭುವನೇಶ್ವರ್: ಒಡಿಯಾದ ಜನಪ್ರಿಯ ಕಿರುತೆರೆ ನಟಿ ರಶ್ಮಿರೇಖಾ ಓಜಾ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಾಡಿಗೆ ಮನೆಯಲ್ಲಿ ನಟಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  


COMMERCIAL BREAK
SCROLL TO CONTINUE READING

ರಶ್ಮಿರೇಖಾ ಒಡಿಶಾ ರಾಜಧಾನಿ ಭುವನೇಶ್ವರದ ನಯಾಪಲ್ಲಿ ಪ್ರದೇಶದಲ್ಲಿ ತನ್ನ ಸ್ನೇಹಿತ ಸಂತೋಷ್‌ ಎಂಬಾತನೊಂದಿಗೆ ಬಾಡಿಗೆ ಮನೆಯಲ್ಲಿ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ.


ಇದನ್ನೂ ಓದಿ: OTT ಗೆ ಬರಲಿದೆ ಕಾಫಿ ವಿತ್ ಕರಣ್ ಸೀಸನ್ 7.. ಎಲ್ಲಿ? ಯಾವಾಗ? ಇಲ್ಲಿ ತಿಳಿದುಕೊಳ್ಳಿ


ಜೂನ್ 18ರ ರಾತ್ರಿ ತನ್ನ ಬಾಡಿಗೆ ಮನೆಯ ಸೀಲಿಂಗ್‌ಗೆ 23 ವರ್ಷದ ನಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ‘ತನ್ನ ಸಾವಿಗೆ ಯಾರೂ ಕಾರಣರಲ್ಲ’ವೆಂದು ಬರೆದಿರುವ ಡೇತ್‍ನೋಟ್ ಮನೆಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.


‘ತನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಬರೆದಿರುವ ಡೇತ್‍ನೋಟ್ ನಮಗೆ ಸಿಕ್ಕಿದ್ದು, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತಿದೆ. ಈ ಬಗ್ಗೆ ನಾವು ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: Naga Chaitanya: ವಿಚ್ಛೇದನದ ಬಳಿಕ ಈ ನಟಿಯ ಜತೆ ನಾಗ ಚೈತನ್ಯ ಡೇಟಿಂಗ್!?


ಜಗತ್‌ಸಿಂಗ್‌ಪುರ ಜಿಲ್ಲೆಯವರಾದ ರಶ್ಮಿರೇಖಾ ಓಜಾ ಅವರು ಒಡಿಯಾದ ಪ್ರಸಿದ್ಧ ‘Kemiti Kahibi Kaha’ ಧಾರಾವಾಹಿಯಲ್ಲಿನ ನಟನೆಯಿಂದ ಖ್ಯಾತಿ ಪಡೆದುಕೊಂಡಿದ್ದಾರೆ.   


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.