ಮಗಳು ಜಾನಕಿ ಖ್ಯಾತಿಯ ಕಿರುತೆರೆ ನಟ ಮಂಡ್ಯ ರವಿ ಇನ್ನಿಲ್ಲ

ಕಿರುತೆರೆಯ ನಟ ಮಂಡ್ಯದ ರವಿ ಪ್ರಸಾದ ಅನ್ಯಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್ ಆಸ್ಪತ್ರೆಯಲ್ಲಿ ಮಂಡ್ಯ ರವಿ ವಿಧಿವಶರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು, ಕಳೆದ ಕೆಲವು ದಿನಗಳಿಂದ ಅವರು ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

Written by - Zee Kannada News Desk | Last Updated : Sep 15, 2022, 12:28 AM IST
  • ಕಿರುತೆರೆಯ ನಟ ಮಂಡ್ಯದ ರವಿ ಪ್ರಸಾದ ಅನ್ಯಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
  • ಅವರಿಗೆ 42 ವರ್ಷ ವಯಸ್ಸಾಗಿತ್ತು,
  • ಕಳೆದ ಕೆಲವು ದಿನಗಳಿಂದ ಅವರು ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮಗಳು ಜಾನಕಿ ಖ್ಯಾತಿಯ ಕಿರುತೆರೆ ನಟ ಮಂಡ್ಯ ರವಿ ಇನ್ನಿಲ್ಲ title=
Photo Courtsey: Facebook

ಬೆಂಗಳೂರು: ಕಿರುತೆರೆಯ ನಟ ಮಂಡ್ಯದ ರವಿ ಪ್ರಸಾದ ಅನ್ಯಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು, ಕಳೆದ ಕೆಲವು ದಿನಗಳಿಂದ ಅವರು ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ರವಿ ಪ್ರಸಾದ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ನಿರ್ದೇಶಕ ಟಿ.ಎನ್.ಸೀತಾರಾಂ "ಮಗಳು ಜಾನಕಿ ಯ 'ಚಂದು ಭಾರ್ಗಿ' ರವಿ ಅಸ್ತಂಗತ.ಇನ್ನೂ 42..ನಾಲ್ಕು ಜನ್ಮಕ್ಕಾಗುವಷ್ಟು ಪ್ರತಿಭೆ..ಅತ್ಯಂತ ಆಘಾತಕಾರಿ" ಎಂದು ಕಂಬನಿ ಮಿಡಿದಿದ್ದಾರೆ.

ಮೂಲತಃ ಮಂಡ್ಯ ಜಿಲ್ಲೆಯವರಾದ ರವಿ ಪ್ರಸಾದ್ ಅವರು ಖ್ಯಾತ ನಿರ್ದೇಶಕ ಟಿಎನ್ ಸೀತರಾಮ್ ನಿರ್ದೇಶನದ ಹಲವಾರು ಧಾರವಾಹಿಗಳಲ್ಲಿ ಅವರು ನಟಿಸುವ ಮೂಲಕ ಚಿರಪರಿಚಿತರಾಗಿದ್ದರು.

ರವಿ ಪ್ರಸಾದ್ ಅವರು ಪ್ರಮುಖವಾಗಿ ಚಿತ್ರಲೇಖ, ಮಿಂಚು, ಮುಕ್ತ ಮುಕ್ತ, ವರಲಕ್ಷ್ಮೀ ಸ್ಟೋರ್ಸ್ ನಂತಹ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News