Buddivanta-2 : ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ  ಚಿತ್ರತಂಡ "ಬುದ್ದಿವಂತ 2" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.


COMMERCIAL BREAK
SCROLL TO CONTINUE READING

"ಬುದ್ದಿವಂತ" ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ.


ಇದನ್ನೂ ಓದಿ-Uorfi Javed: ನಿಮ್ಮಿಂದ ಭಾರತದ ಪ್ರತಿಷ್ಠೆ ಹಾಳು ಎಂದ ಅಪರಿಚಿತ ವ್ಯಕ್ತಿಗೆ ಉರ್ಫಿ ಜಾವೇದ್ ಕ್ಲಾಸ್​..ವಿಡಿಯೋ ವೈರಲ್‌


ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್,  ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ "ಬುದ್ದಿವಂತ 2".


ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ.  ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.


ಉಪೇಂದ್ರ ಅವರಿಗೆ ನಾಯಕಿಯರಾಗಿ  ಸೋನಾಲ್ ಮೊಂಟೆರೊ ಹಾಗೂ  ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. 


ಇದನ್ನೂ ಓದಿ-Aditya Roy : ಮಳೆಯಲ್ಲಿ ರೂಮರ್ಡ್ ಲವ್​ಬರ್ಡ್ಸ್ ಜಾಲಿ ರೈಡ್..ಕ್ಯಾಮೆರಾ ನೋಡಿ ಮುಖ ಮುಚ್ಚಿಕೊಂಡ ಅನನ್ಯಾ ಪಾಂಡೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.