Video: ‘ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್': ದರ್ಶನ್ ಚಾಲೆಂಜ್ ಹಾಕಿದ್ದು ಯಾರಿಗೆ?

ಎಲ್ಲರೂ ಕಾತುರದಿಂದ ಕಾಯುತ್ತಿದ್ದ 'ದರ್ಶನ್ ಯಾರಿಗೆ ಓಪನ್ ಚಾಲೆಂಜ್ ಹಾಕ್ತಾರೆ' ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.  

Last Updated : Jul 2, 2019, 01:50 PM IST
Video: ‘ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್': ದರ್ಶನ್ ಚಾಲೆಂಜ್ ಹಾಕಿದ್ದು ಯಾರಿಗೆ? title=
Pic Courtesy: Facebook

ಬೆಂಗಳೂರು: ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ ಬಂದಾಗ ಎಲ್ಲಾನು ತಿಳಿಸುತ್ತೇನೆ ನಿಮ್ಮ ದಾಸ ದರ್ಶನ್ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಬೆಳಿಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಏನೇನೋ ಬರೆಯುವುದಿಲ್ಲ. ಅಗತ್ಯವಿದ್ದಾಗ ಮಾತ್ರ ಹಿತ ಮಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರುವ ದರ್ಶನ್ ಅವರ 'ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್' ಎಂಬ ಸಾಲುಗಳನ್ನು ಕಂಡು ಎಲ್ಲರ ತಲೆಯಲ್ಲಿ ಹುಳ ಬಿಟ್ಟಂತೆ ಆಗಿತ್ತು. 

ಇದೀಗ ಎಲ್ಲರೂ ಕಾತುರದಿಂದ ಕಾಯುತ್ತಿದ್ದ ‘ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್'. 'ದರ್ಶನ್ ಯಾರಿಗೆ ಓಪನ್ ಚಾಲೆಂಜ್ ಹಾಕ್ತಾರೆ' ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ದರ್ಶನ್ ಯಾರಿಗೆ ಈ ಓಪನ್ ಚಾಲೆಂಜ್ ಮಾಡಿದ್ದಾರೆ. ಆ ಸೆಲೆಬ್ರಿಟಿ ಯಾರು ಎಂಬೆಲ್ಲಾ ಕುತೂಹಲಕಾರಿ ಪ್ರಶ್ನೆಗಳಿಗೆ ದರ್ಶನ್ ಅವರಿಂದಲೇ ಉತ್ತರ ಸಿಗಲಿದೆ. ಈ ಕೆಳಗಿನ ವಿಡಿಯೋ ಒಮ್ಮೆ ನೋಡಿ...

Trending News