ಬೆಂಗಳೂರು : ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಬಹು ನಿರೀಕ್ಷೆಯ ಕನ್ನಡ ಮರಾಠಿ ಹಿಂದಿ ತಮಿಳು ತೆಲುಗು ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ತಯಾರಾಗುತ್ತಿರುವ ಮಾಸ್ ಆಕ್ಷನ್ ಆಪರೇಷನ್ ಲಂಡನ್ ಕೆಫೆ ಚಿತ್ರ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.ಚಿತ್ರವನ್ನು ಆದಷ್ಟು ಬೇಗ  ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ಹೇಳಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಕವೀಶ್ ಮತ್ತು ಮೇಘಾ ಶೆಟ್ಟಿ ಜೊತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ ವಿರಾಟ್ ಮಡಕೆ ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್,ಕೃಷ್ಣ ಹೆಬ್ಬಾಳೆ,ಧರ್ಮೇಂದ್ರ ಅರಸ್,ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ.ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜೊತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ.ನಾಗಾರ್ಜುನ್ ಛಾಯಾಗ್ರಹಣವಿದೆ.ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ.ಎಂ.ಪ್ರಕಾಶ್ ಸಂಕಲನದ ಜೊತೆಯಲ್ಲಿ ನಾಗೇಂದ್ರ ಪ್ರಸಾದ್,ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.


ಇದನ್ನೂ ಓದಿ : ವಿರೋಚಿತ ಗೆಲುವು ಸಾಧಿಸಿದ ಪವನ್‌ಗೆ ತಿಲಕ ಇಟ್ಟ ಪತ್ನಿ, ತಂದೆಯ ಕಂಡು ಭಾವುಕನಾದ ಮಗ..!
 
ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.


ಇದನ್ನೂ ಓದಿ :"ಎರಡು ತಿಂಗಳು ನನ್ನೊಂದಿಗಿದ್ದರೆ ನಾಯಕಿ ಅವಕಾಶ ನೀಡುತ್ತೇನೆ" ನಿರ್ದೇಶಕರ ಕರಾಳ ಮುಖ ಬಿಚ್ಚಿಟ್ಟ ಖ್ಯಾತ ನಟಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.