ಬಿಡುಗಡೆಯಾಯಿತು 'ಫಾರೆಸ್ಟ್' ಚಿತ್ರದ "ಪೈಸಾ ಪೈಸಾ ಪೈಸಾ" ಹಾಡು: ಚಂದನ್ ಶೆಟ್ಟಿ ಗಾಯನಕ್ಕೆ ಹೆಜ್ಜೆ ಹಾಕಿದ ಕಲಾವಿದರು

ಶೀರ್ಷಿಕೆ, ತಾರಾಬಳಗ, ಕಾನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ "ಫಾರೆಸ್ಟ್" ಚಿತ್ರದ 2025 ರ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Written by - YASHODHA POOJARI | Last Updated : Dec 20, 2024, 07:58 PM IST
    • ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ "ಫಾರೆಸ್ಟ್" ಚಿತ್ರ
    • ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರ
    • ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡು
ಬಿಡುಗಡೆಯಾಯಿತು 'ಫಾರೆಸ್ಟ್' ಚಿತ್ರದ "ಪೈಸಾ ಪೈಸಾ ಪೈಸಾ" ಹಾಡು: ಚಂದನ್ ಶೆಟ್ಟಿ ಗಾಯನಕ್ಕೆ ಹೆಜ್ಜೆ ಹಾಕಿದ ಕಲಾವಿದರು title=
File Photo

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ "ಫಾರೆಸ್ಟ್" ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಅವರು ಬರೆದಿರುವ "ಪೈಸಾ ಪೈಸಾ ಪೈಸಾ" ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. RAP ಶೈಲಿಯಲ್ಲಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಇದನ್ನೂ ಓದಿ: ಈ ರಾಶಿಯವರಿಗೆ ಬರೋಬ್ಬರಿ 20 ವರ್ಷಗಳ ಶುಕ್ರ ದೆಸೆ !ನಿರಂತರ ರಾಜಯೋಗದಿಂದ ಕುಚೇಲ ಕೂಡಾ ಕುಬೇರನಾಗುವ ಕಾಲ ! ಬೆನ್ನ ಹಿಂದೆಯೇ ಇರುವಳು ಮಹಾ ಲಕ್ಷ್ಮೀ

ಶೀರ್ಷಿಕೆ, ತಾರಾಬಳಗ, ಕಾನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ "ಫಾರೆಸ್ಟ್" ಚಿತ್ರದ 2025 ರ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಸದಭಿರುಚಿ ಚಿತ್ರಗಳನ್ನು ನೀಡುವ ಹಂಬಲ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಾಡಿನಲ್ಲೇ  ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆ ಹೊಂದಿರುವ ಈ ಚಿತ್ರವನ್ನು  ಚಂದ್ರಮೋಹನ್ ನಿರ್ದೇಶಿಸಿದ್ದಾರೆ.  .  

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ,  ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ  ಛಾಯಾಗ್ರಹಣ, ಅರ್ಜುನ್ ಕಿಟ್ಟು  ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ. ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ದೊಡ್ಮನೆ ಆಟದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ !ನಾಮಿನೇಟ್ ಆದ ನಾಲ್ಕು ಸ್ಟ್ರಾಂಗ್ ಸ್ಪರ್ಧಿಗಳಲ್ಲಿ ಈ ವಾರ BIGGBOSS ಮನೆಯಿಂದ ಹೊರ ಬರುತ್ತಿರುವವರು ಇವರೇ ! 

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಮಲ್ಟಿಸ್ಟಾರರ್ ಸಿನಿಮಾದ ತಾರಾಬಳಗದಲ್ಲಿ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದವರಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News