PAN India star Yash In Dharmashthala: ಪ್ಯಾನ್​ ಇಂಡಿಯಾ ಸ್ಟಾರ್​ ನಟ ಯಶ್​ (Pan India star actor Yash) ಇಂದು ಪತ್ನಿ ಮತ್ತು ಮಕ್ಕಳೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ನಿಯಮದಂತೆ ಪಂಚೆ, ಶರ್ಟ್​ ಧರಿಸಿ ಸೂರ್ಯ ಶ್ರೀಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಮಣ್ಣಿನ ಹರಕೆ (Mannina Harake) ಅರ್ಪಿಸಿದ್ದಾರೆ.


COMMERCIAL BREAK
SCROLL TO CONTINUE READING

[[{"fid":"429760","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]] 


ಮಣ್ಣಿನ ಹರಕೆಯ ಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಸೂರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ಪತ್ನಿ ರಾಧಿಕಾ ಪಂಡಿತ್ (Radhika Pandit), ಮಕ್ಕಳಾದ ಐರಾ ಮತ್ತು ಯಥರ್ವ್ ಸಮೇತರಾಗಿ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ (Rocking star Yash) ಹರಕೆ ತೀರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. 


 


ಇದನ್ನೂ ಓದಿ- ವಿಶ್ವದ ಶ್ರೀಮಂತ ವ್ಯಕ್ತಿಯ ಮಗನ ಮದುವೆಯಲ್ಲಿ ಸಾಮಾನ್ಯ ಬಸ್ ಡ್ರೈವರ್‌ನ ಮಗ..! ಸಾಧನೆ ಅಂದ್ರೆ ಇದಪ್ಪಾ ಎಂದ ನೆಟ್ಟಿಗರು


ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಯಶ್​ ಕುಟುಂಬ (Yash Family In Dharmashthala) ಸಮೇತರಾಗಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಆ ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ನಂತರ ಇಬ್ಬರೂ ಕುಳಿತು ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. 


4 ಕೋಟಿ ಬಂಗಲೆ, ದುಬಾರಿ ಕಾರುಗಳು.. ಕೆಜಿಎಫ್ ಸ್ಟಾರ್ ಯಶ್ ಆಸ್ತಿ ಒಟ್ಟು ಎಷ್ಟು ಕೋಟಿ ಗೊತ್ತಾ?


ಗಮನಾರ್ಹವಾಗಿ, ಕೆಜಿಎಫ್​ ಸಿನಿಮಾದ ಬಳಿಕ ಮತ್ತೊಂದು ಬಾರಿ ಬಜೆಟ್​ನ ಪ್ಯಾನ್​ ಇಂಡಿಯಾ ಸಿನಿಮಾ 'ಟಾಕ್ಸಿಕ್'ನಲ್ಲಿ ನಟ ಯಶ್​ ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ವೆಂಕಟ್​ ಹೆಗಲ ಮೇಲಿದ್ದು, ಚಿತ್ರಕ್ಕಾಗಿ ಹೊಸ ಹೇರ್​ ಸ್ಟೈಲ್​ ನೊಂದಿಗೆ ಸದ್ಯ ಯಶ್​ ಟ್ರೆಂಡಿಂಗ್​ನಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.