ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಮದುವೆ ಡೇಟ್‌ ಫಿಕ್ಸ್‌..! ರಾಜಸ್ಥಾನದಲ್ಲಿ ವಿವಾಹ

Parineeti raghav chadha marriage : ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಮತ್ತು ಸಂಸದ ರಾಘವ್ ಚಡ್ಡಾ ಎಂಗೆಜ್‌ ಆಗಿರುವುದು ಎಲ್ಲರಿಗೂ ತಿಳಿದಿದೆ. ಇದೀಗ ಈ ಜೋಡಿ ಹಸೆಮಣೆ ಏರಲು ರೆಡಿಯಾಗಿದ್ದು, ಮದುವೆ ದಿನಾಂಗವನ್ನು ಘೋಷಣೆ ಮಾಡಿದ್ದಾರೆ.

Written by - Krishna N K | Last Updated : Aug 20, 2023, 03:50 PM IST
  • ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ನಾಯಕ ರಾಘವ್ ಚಡ್ಡಾ ಒಂದು ತಿಂಗಳಲ್ಲಿ ಮದುವೆಯಾಗಲಿದ್ದಾರೆ.
  • ಕೆಲವು ತಿಂಗಳ ಹಿಂದೆ ಪರಿಣಿತಿ ರಾಘವ್‌ ಚಡ್ಡಾ ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
  • ಇದೀಗ ತಮ್ಮ ಮದುವೆಯ ದಿನಾಂಕ ಮತ್ತು ಸ್ಥಳವನ್ನು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಮದುವೆ ಡೇಟ್‌ ಫಿಕ್ಸ್‌..! ರಾಜಸ್ಥಾನದಲ್ಲಿ ವಿವಾಹ title=

Parineeti chopra marriage date : ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ನಾಯಕ ರಾಘವ್ ಚಡ್ಡಾ ಒಂದು ತಿಂಗಳಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಕೆಲವು ತಿಂಗಳ ಹಿಂದೆ ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ದಂಪತಿಗಳು ತಮ್ಮ ಮದುವೆಯ ದಿನಾಂಕ ಮತ್ತು ಸ್ಥಳವನ್ನು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಈ ಸ್ಟಾರ್‌ ಜೋಡಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆಯಾಗಲು ಪ್ಲಾನ್‌ ಮಾಡಿದ್ದಾರಂತೆ.

ಹೌದು.. ವದಂತಿಗಳು ಮತ್ತು ಅಭಿಮಾನಿಗಳ ನಿರೀಕ್ಷೆಯ ನಡುವೆ ದಂಪತಿಗಳು ಸೆಪ್ಟೆಂಬರ್ 25 ರಂದು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಅವರ ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರು ಈ ಅದ್ಧೂರಿ ವಿವಾಹಮಹೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪರಿಣಿತಿ ಅವರ ತಂಡ ಮದುವೆಗೆ ಸಿದ್ದತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಧನಾ ರಾಮ್ ಇನ್ಮುಂದೆ ʼಆರಾಧನಾʼ : ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ

ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಅವರು ಒಂದೆರಡು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದರು. ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಮೇ 13 ರಂದು ಜೋಡಿಯ ನಿಶ್ಚಿತಾರ್ಥ ನಡೆಯಿತು. ಸಪ್ಟೆಂಬರ್‌ 25 ರಂದು ಮದುವೆಯಾಗಲು ನಿರ್ಧರಿಸಿದ್ದಾರೆ. ಕೆಲಸದ ಮುಂಭಾಗದಲ್ಲಿ, ಪರಿಣಿತಿ ಚೋಪ್ರಾ ಮುಂದಿನ ಅಮರ್ ಸಿಂಗ್ ಚಮ್ಕಿಲಾ ಅವರ ಜೀವನಚರಿತ್ರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News