ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಪಾರು ಸೀರಿಯಲ್ ಆದಿ..ಶರತ್ ಪದ್ಮನಾಭ್ ಚೊಚ್ಚಲ ಕನಸಿಗೆ ಟೈಟಲ್ ಫಿಕ್ಸ್!!

Paru Serial Aadi: ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್  ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ. 

Written by - Savita M B | Last Updated : Mar 28, 2024, 03:37 PM IST
  • ’ಅನಿಮಾ’ ಮೂಲಕ ಹೀರೋ ಆದ ಪಾರು ಸೀರಿಯಲ್ ಆದಿ..
  • ಪಾರು ಆದಿ ಈಗ ಹೀರೋ..ಶರತ್ ಪದ್ಮನಾಭ್ ಹೊಸ ಸಿನಿಮಾ ‘ಅನಿಮಾ..
  • ’ಅನಿಮಾ’ ಮೂಲಕ ಪಾರು ಆದಿ ಹೊಸ ಹಂಗಾಮ..
ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಪಾರು ಸೀರಿಯಲ್ ಆದಿ..ಶರತ್ ಪದ್ಮನಾಭ್ ಚೊಚ್ಚಲ ಕನಸಿಗೆ ಟೈಟಲ್ ಫಿಕ್ಸ್!! title=

Paru Serial: ಅನಿಮಾಗೆ ವರ್ಧನ್ ಎಂ ಎಚ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ವರ್ಧನ್ ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ,.

ಇದನ್ನೂ ಓದಿ-Chaitra J Achar: ನೀಲಿ ಮೈಸೂರು ಸಿಲ್ಕ್‌ ಸೀರೆಯಲ್ಲಿ ಕಂಗೊಳಿಸಿದ ಸಪ್ತ ಸಾಗರದಾಚೆಯ ಚೆಲುವೆ!

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಿಮಾ ಸಿನಿಮಾ ಕೊನೆ ಹಂತದ ಚಿತ್ರೀಕರಣದಲ್ಲಿದೆ.  ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗ್ಲೇ ಶೂಟಿಂಗ್ ನಡೆಸಲಾಗಿದೆ. ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗ್ತಿದೆ.

ಇದನ್ನೂ ಓದಿ-Sara Annaiah: ಸೀರೆಯುಟ್ಟು ಪ್ರಖ್ಯಾತ ದೇವಾಲಯ ದರ್ಶನ ಪಡೆದ ಅಮೃತಧಾರೆಯ ಬೊಲ್ಡ್‌ ಬೆಡಗಿ..!!

ಶರತ್ ನಾಯಕನಾಗಿ ನಟಿಸ್ತಿದ್ದು, ಅನುಷಾ ಕೃಷ್ಣ ನಾಯಕಿಯರಾಗಿ ಬಣ್ಣ ಹಚ್ಚಿದ್ದು, ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ,  ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.  ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಹಿನ್ನೆಲೆ ಸಂಗೀತ, ಉಜ್ವಲ್ ಚಂದ್ರ ಸಂಕಲನ ಅನಿಮಾನ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News