ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಪಾರು ಸೀರಿಯಲ್ ಆದಿ..ಶರತ್ ಪದ್ಮನಾಭ್ ಚೊಚ್ಚಲ ಕನಸಿಗೆ ಟೈಟಲ್ ಫಿಕ್ಸ್!!
Paru Serial Aadi: ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.
Paru Serial: ಅನಿಮಾಗೆ ವರ್ಧನ್ ಎಂ ಎಚ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ವರ್ಧನ್ ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ,.
ಇದನ್ನೂ ಓದಿ-Chaitra J Achar: ನೀಲಿ ಮೈಸೂರು ಸಿಲ್ಕ್ ಸೀರೆಯಲ್ಲಿ ಕಂಗೊಳಿಸಿದ ಸಪ್ತ ಸಾಗರದಾಚೆಯ ಚೆಲುವೆ!
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಿಮಾ ಸಿನಿಮಾ ಕೊನೆ ಹಂತದ ಚಿತ್ರೀಕರಣದಲ್ಲಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗ್ಲೇ ಶೂಟಿಂಗ್ ನಡೆಸಲಾಗಿದೆ. ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗ್ತಿದೆ.
ಇದನ್ನೂ ಓದಿ-Sara Annaiah: ಸೀರೆಯುಟ್ಟು ಪ್ರಖ್ಯಾತ ದೇವಾಲಯ ದರ್ಶನ ಪಡೆದ ಅಮೃತಧಾರೆಯ ಬೊಲ್ಡ್ ಬೆಡಗಿ..!!
ಶರತ್ ನಾಯಕನಾಗಿ ನಟಿಸ್ತಿದ್ದು, ಅನುಷಾ ಕೃಷ್ಣ ನಾಯಕಿಯರಾಗಿ ಬಣ್ಣ ಹಚ್ಚಿದ್ದು, ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ, ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಹಿನ್ನೆಲೆ ಸಂಗೀತ, ಉಜ್ವಲ್ ಚಂದ್ರ ಸಂಕಲನ ಅನಿಮಾನ ಚಿತ್ರಕ್ಕಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.