ದರ್ಶನ್ ಜೊತೆಗಿರುವ ಫೋಟೋ ಹಂಚಿಕೊಂಡ ಪವಿತ್ರಗೌಡ, ಖಡಕ್ ವಾರ್ನಿಂಗ್ ಕೊಟ್ಟ ಡಿಬಾಸ್ ಪತ್ನಿ
Pavitra Gowda Instagram Post : ಕಾಟೇರ ಸಿನಿಮಾ ಯಶಸ್ಸಿನಲ್ಲಿರುವ ನಟ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರ ಕುಟುಂಬದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಪವಿತ್ರಗೌಡ ಹಂಚಿಕೊಂಡಿರುವ ಫೋಟೋಸ್, ದಚ್ಚು ಪತ್ನಿ ವಿಜಯಲಕ್ಷ್ಮಿ ಆಕ್ರೋಶಕ್ಕೆ ಗುರಿಯಾಗಿದೆ..
Pavithra Gowda vs Vijayalakshmi Darshan : ಪವಿತ್ರ ಗೌಡ ಸೋಶಿಯಲ್ ಮೀಡಿಯಾದಲ್ಲಿ ನನ್ನ ಮತ್ತು ದರ್ಶನ್ ಅವರ 10ವರ್ಷಗಳ ಜರ್ನಿ ಅನ್ನೋ ಫೋಟೋ ಶೇರ್ ಮಾಡಿದ್ದರು. ಅದಕ್ಕೆ ದರ್ಶನ್ ಪತ್ನಿ ವಿಜಿ ಫುಲ್ ಗರಂ ಆಗಿದ್ದು, ಪವಿತ್ರ ಗೌಡ ಅವರ ಹಳೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಖಡಕ್ ವಾರ್ನಿಂಗ್ ಸಹ ಕೊಟ್ಟಿದ್ದಾರೆ.
ದರ್ಶನ್ ಅಂದ್ರೆ ಕಾಂಟ್ರವರ್ಸಿ.. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನದಲ್ಲಿ ಮನೆ ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಆಗಾಗ್ಗೆ ಕಾಂಟ್ರವರ್ಸಿ ಇಂದಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ, ಚಾಲೆಜಿಂಗ್ ಸ್ಟಾರ್ ಮೂವಿ ಕಾಟೇರ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್‌ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ಇದರ ನಡುವೆ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಆಪ್ತೆ ಪವಿತ್ರಗೌಡ ಮತ್ತು ಪತ್ನಿ ವಿಜಯಲಕ್ಷ್ಮಿ ಜಡೆ ಜಗಳ ಶುರುವಾಗಿದೆ.
ದರ್ಶನ್ ಜೊತೆ ಫೋಟೋ ಹಂಚಿಕೊಂಡ ಪವಿತ್ರಗೌಡ..!
ಹೌದು, ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಮೊದಲಿಗೆ ದರ್ಶನ್ ಆಪ್ತೆ ಪವಿತ್ರಗೌಡ ತಾವು ದರ್ಶನ್ ಜೊತೆಗಿರುವ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಇದರಲ್ಲಿ "ಒಂದು ದಶಕ ಕಳೆದಿದೆ, ಇದು ಶಾಶ್ವತವಾಗಿರಲಿ." ನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆ ಥ್ಯಾಂಕ್ ಯು ಎಂದು ಬರೆದುಕೊಂಡಿದ್ದು, ಈ ಪೋಸ್ಟ್ @darshanthoogudeepashrinivas @khushigowda_7 ಅವರನ್ನು ಟ್ಯಾಗ್ ಸಹ ಮಾಡಿದ್ದಾರೆ.
ದೊಡ್ಮನೆ ಕುಡಿಯ ಜೊತೆ ಫಾರ್ಮ್‌ಹೌಸ್‌ನಲ್ಲಿ ಕಾಟೇರನ ಸಂಕ್ರಾಂತಿ ಆಚರಣೆ!
ಪವಿತ್ರಗೌಡ ಅವರ ಪತಿ ಸಂಜಯ್ ಸಿಂಗ್ ಮತ್ತು ಅವರ ಮಗಳ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ ದರ್ಶನ್, ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ, ಅದು ಅವಳ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ. ಪುರುಷ ವಿವಾಹಿತನೆಂದು ತಿಳಿದಿದ್ದರೂ ಕೂಡ ತಮ್ಮ ವೈಯಕ್ತಿಕ ಅಗತ್ಯಗಳು ಮತ್ತು ಕಾರ್ಯಸೂಚಿಗಾಗಿ ಅವರೊಂದಿಗಿರುವುದನ್ನುಆಯ್ಕೆ ಮಾಡಿಕೊಳ್ಳುತ್ತಾಳೆ… ಈ ಚಿತ್ರಗಳು ಸ್ಪಷ್ಟವಾಗಿವೆ. ಕುಶಿ ಗೌಡ ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು .... ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ತೆಗೆದುಕೊಳ್ಳುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.