ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ಮೊದಲ ಬಾರಿಗೆ ನಿರ್ಮಾಪಕರಾಗಿ ಹೆಜ್ಜೆ ಇಟ್ಟಿದ್ದಾರೆ. ಆರಂಭದಿಂದಲೂ ಈ ಚಿತ್ರ ತನ್ನ ಕಂಟೆಂಟ್ ಮೂಲಕ ಭಾರೀ ಸದ್ದು ಮಾಡ್ತಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿರುವ, ಹಲವು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನ ಒಡಲಿಗೆ ಹಾಕಿಕೊಂಡಿರುವ, ಹಲವು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನದಲ್ಲಿಕೊಂಡು ಭಾರೀ ಮೆಚ್ಚುಗೆ ಪಡೆದಿರುವ ಡೊಳ್ಳು ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ.


COMMERCIAL BREAK
SCROLL TO CONTINUE READING

ನಟರಾಕ್ಷಸ ಡಾಲಿ ಧನಂಜಯ್ ತಮ್ಮ ಅಮೃತ ಹಸ್ತದಿಂದ "ಮಯಾನಗರಿ" ಎಂಬ ಹಾಡು ಬಿಡುಗಡೆ ಮಾಡಿ, ತಾವು ಬೆಂಗಳೂರಿಗೆ ಬಂದ ದಿನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಹಳ್ಳಿಯಿಂದ ಕೆಲಸ ಅರಸಿ ಬೆಂಗಳೂರಿಗೆ ಬರುವ ನಾಯಕನ ಕಣ್ಣಲ್ಲಿ ಮಯಾನಗರಿ ಸೊಬಗನ್ನು ತೆರೆದಿಡುವ ಈ ಹಾಡಿಗೆ ಪ್ರದ್ಯುಮ್ನ ನರಹಳ್ಳಿ ಪ್ರಾಸಬದ್ಧ ಪದಪುಂಜಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಆನಂತ್ ಕಾಮನ್ ಸಂಗೀತದ ಇಂಪು ತುಂಬಿರುವ ಹಾಡಿಗೆ ನಿರ್ದೇಶಕ ಸಾಗರ್ ಪುರಾಣಿಕ್ ಧ್ವನಿಯಾಗಿದ್ದಾರೆ. ಈ ಮೂಲಕ ಸಾಗರ್ ಗಾಯಕರಾಗಿಯೂ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದಾರೆ. 


ಇದನ್ನೂ ಓದಿ- 'ಬಿಗ್‌ಬಾಸ್ ಓಟಿಟಿ ಸೀಸನ್-1‌'ನಲ್ಲಿ ಮೊದಲ ವಾರ ಎಲಿಮಿನೇಟ್‌ ಆಗಿದ್ದು ಯಾರು..?


ಜನಪದ ಕಲೆ ಡೊಳ್ಳಿನ ಸುತ್ತಾ ಸಾಗುವ ಕಥಾಹಂದರ ಹೊಂದಿರುವ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಒಡೆಯರ್ ಮೂವೀಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸಿದ್ದು, ನಿಧಿ ಹೆಗ್ಡೆ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಉಳಿದಂತೆ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರತ್ ಮುಂತಾದ ಕಲಾವಿದರು ನಟಿಸಿದ್ದಾರೆ.


ಇದನ್ನೂ ಓದಿ- Bigg Boss Kannada OTT : ಕಾಂಟ್ರವರ್ಷಿಯಲ್‌ ಲೇಡಿ ಸೋನು ಗೌಡ ಎಲಿಮಿನೇಟ್‌ ಆದ್ರಾ..? ಇಲ್ವಾ..?


ಶ್ರೀನಿಧಿ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಅನಂತ್ ಕಾಮಂತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾ ಚಿತ್ರಕ್ಕಿದೆ. ಜನಪದ ಕಲೆ ಮಹತ್ವ ಎತ್ತಿ ತೋರಿಸುವ ಈ ಚಿತ್ರ ಇದೇ 26ರಂದು ಬಿಗ್ ಸ್ಕ್ರೀನ್ ನಲ್ಲಿ ಪಯಣ ಶುರು ಮಾಡಲಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.