Renukaswamy murder case : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್‌ಗೆ ಪೊಲೀಸರು ಬಿಗ್ ಶಾಕ್ ನೀಡಲು ರೆಡಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ದರ್ಶನ್‌ ಬಿಡುಗಡೆಯಾದ ದಿನ ಅಂದ್ರೆ, ಅಕ್ಟೋಬರ್ 30ರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖಾ ತಂಡದೊಂದಿಗೆ ಮಹತ್ವದ ಸಭೆ ನಡೆಸಿದ್ದು, ಸದ್ಯದಲ್ಲೇ ನಟನಿಗೆ ಬಿಗ್‌ ಶಾಕ್ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. 


COMMERCIAL BREAK
SCROLL TO CONTINUE READING

ಇನ್ನು ಇದರ ಭಾಗವಾಗಿ ದರ್ಶನ್ ಜಾಮೀನಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ..


ಇದನ್ನೂ ಓದಿ:50 ವರ್ಷದ ನಟನನ್ನು ಮದುವೆಯಾದ ಖ್ಯಾತ ಸಿರೀಯಲ್ ನಟಿ!‌ ಪೋಟೋಸ್‌ ನೋಡಿ ಫುಲ್‌ ಶಾಕ್‌!!


ಈ ಕುರಿತು ನವೆಂಬರ್ 4 ರಂದು ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ. ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದರೆ ದರ್ಶನ್‌ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.. ಈಗ ನೀಡಿರುವ ಜಾಮೀನು ಅವಧಿ ಚಿಕಿತ್ಸೆಗೆ ಮಾತ್ರ. ಆದರೆ ಅವರು ಸಾಕ್ಷಿಗಳನ್ನು ಬೆದರಿಸುವ ಸಾಧ್ಯತೆಯಿದೆ. ಇದೇ ಅಂಶವನ್ನು ಪೊಲೀಸರು ಸುಪ್ರೀಂ ಕೋರ್ಟ್‌ನ ಮುಂದಿಡಲಿದ್ದಾರೆ.


ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಈ ನಡುವೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್‌ ಶಸ್ತ್ರಚಿಕಿತ್ಸೆಗಾಗಿ ಜಾಮೀನು ಅರ್ಜಿ ಸಲ್ಲಿಸಿದ್ದರು.. ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿ ಜಾಮೀನು ನೀಡಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ