ವರ್ತೂರ್ ಸಂತೋಷ್ ಬಳಿಕ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ಕೇಸ್: ಇಂದೇ ಅರೆಸ್ಟ್ ಸಾಧ್ಯತೆ…!
Pallavi Prashanth Police case: ಜುಬಿಲಿ ಹಿಲ್ಸ್ ಪೊಲೀಸರು ಪಲ್ಲವಿ ಪ್ರಶಾಂತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 290, 353, 427 ಮತ್ತು 149 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದಲ್ಲದೆ, ಕೆಲವು ಅಭಿಮಾನಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ.
Pallavi Prashanth Police case: ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ತೆಲುಗು ಸೀಸನ್ 7 ವಿನ್ನರ್ ಪಲ್ಲವಿ ಪ್ರಶಾಂತ್ ವಿರುದ್ಧ ಹೈದರಾಬಾದ್ ಜುಬಿಲಿ ಹಿಲ್ಸ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ನಟ ಕಿಚ್ಚ ಸುದೀಪ್ ತಂದೆ-ತಾಯಿ ಯಾರು ಗೊತ್ತಾ? ಕರುನಾಡ ಮಾಣಿಕ್ಯನ ಅಪ್ಪ ಸ್ಯಾಂಡಲ್ವುಡ್’ನಲ್ಲಿ ಸಖತ್ ಫೇಮಸ್
ಭಾನುವಾರ ರಾತ್ರಿ ಬಿಗ್ ಬಾಸ್ 7 ರ ಗ್ರ್ಯಾಂಡ್ ಫಿನಾಲೆ ವೇಳೆ ಅನ್ನಪೂರ್ಣ ಸ್ಟುಡಿಯೋಸ್ ಬಳಿ ಅಭಿಮಾನಿಗಳು ಗಲಭೆ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಜುಬಿಲಿ ಹಿಲ್ಸ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಇದಕ್ಕೆಲ್ಲಾ ಪಲ್ಲವಿ ಪ್ರಶಾಂತ್ ಅವರ ಅಭಿಮಾನಿಗಳು ಹೊಣೆಗಾರರಾಗಿದ್ದರೂ ಸಹ, ಅವರ ವಿರುದ್ಧವೇ ಆರು ಸೆಕ್ಷನ್’ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಜುಬಿಲಿ ಹಿಲ್ಸ್ ಪೊಲೀಸರು ಪಲ್ಲವಿ ಪ್ರಶಾಂತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 290, 353, 427 ಮತ್ತು 149 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದಲ್ಲದೆ, ಕೆಲವು ಅಭಿಮಾನಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಬಿಗ್ ಬಾಸ್ 7 ರ ವಿನ್ನರ್ ಆಗಿ ಪಲ್ಲವಿ ಪ್ರಶಾಂತ್ ಹೊರಹೊಮ್ಮಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ, ಅವರ ಅಭಿಮಾನಿಗಳು ಕೃಷ್ಣನಗರದ ಅನ್ನಪೂರ್ಣ ಸ್ಟುಡಿಯೋಸ್’ಗೆ ಆಗಮಿಸಿದ್ದರು. ಇದೇ ಸಮಯದಲ್ಲಿ ಅಮರದೀಪ್ ಅಭಿಮಾನಿಗಳು ಕೂಡ ಅಲ್ಲಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.
ಇದನ್ನೂ ಓದಿ: ವಂಚನೆ ಆರೋಪ… ವಿರಾಟ್ ಕೊಹ್ಲಿಯ ‘ಬೆಸ್ಟ್ ಫ್ರೆಂಡ್’ ಕ್ರಿಕೆಟ್ ಲೋಕದಿಂದ ಬ್ಯಾನ್!
ಇನ್ನು ಆರ್ ಟಿಸಿ ಬಸ್’ಗಳ ಮೇಲಿನ ದಾಳಿಯನ್ನು ಎಂಡಿ ವಿಸಿ ಸಜ್ಜನರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಅವರ ಸೂಚನೆಯಂತೆ ಆರ್‌ಟಿಸಿ ಅಧಿಕಾರಿಗಳು ಜುಬ್ಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿದ್ದು ಪಲ್ಲವಿ ಪ್ರಶಾಂತ್ ಅಭಿಮಾನಿಗಳು ಭಾಗಿಯಾಗಿರುವುದು ಪತ್ತೆಯಾಗಿದೆ. ಇದರಿಂದಾಗಿ ಪಲ್ಲವಿ ಪ್ರಶಾಂತ್ ಹಾಗೂ ಅವರ ಅಭಿಮಾನಿಗಳ ಮೇಲೆ ಪ್ರಕರಣ ದಾಖಲಾಗಿದೆ. ಮೇಲಾಗಿ ಪಲ್ಲವಿ ಪ್ರಶಾಂತ್ ಅವರ ಅಭಿಮಾನಿಗಳ ಹಲ್ಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಅವರ ವಿರುದ್ಧ ಸುಮೋಟೋ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ಶೀಘ್ರದಲ್ಲೇ ಪಲ್ಲವಿ ಪ್ರಶಾಂತ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ