Complaint against Sri Reddy : ಟಾಲಿವುಡ್‌ನ ವಿವಾದಿತ ನಟಿ ಶ್ರೀರೆಡ್ಡಿ ವಿರುದ್ಧ ಕರ್ನೂಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶ ಸಿಎಂ ಚಂದ್ರಬಾಬು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವರಾದ ಲೋಕೇಶ್ ಮತ್ತು ಅನಿತಾ ಅವರ ಮೇಲೆ ಶ್ರೀರೆಡ್ಡಿ ಅನುಚಿತ ಕಾಮೆಂಟ್ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ನಟಿ ವಿರುದ್ಧ ಟಿಡಿಪಿ ನಾಯಕ ರಾಜು ಯಾದವ್ ಪೊಲೀಸ್ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನೂಲ್ 3 ನಗರ ಪೊಲೀಸರು ಶ್ರೀರೆಡ್ಡಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ವಿರುದ್ಧ ಶ್ರೀರೆಡ್ಡಿ ಆಗಾಗ್ಗೆ ಕಟುವಾದ ಟೀಕೆಗಳನ್ನು ಮಾಡುತ್ತಲೇ ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗಿದ್ದಾರೆ. 


ಇದನ್ನೂ ಓದಿ:ಆ ದಿನ ಮಾತ್ರ ನಾನು ಮತ್ತು ವಿರಾಟ್ ಕೊಹ್ಲಿ..! ಕೊನೆಗೂ ಲವ್‌ ಮ್ಯಾಟರ್‌ ಬಿಚ್ಚಿಟ್ಟ ತಮನ್ನಾ


ಇನ್ನು ದೂರಿನ ಪ್ರಕಾರ, ಶ್ರೀ ರೆಡ್ಡಿ ಅವರು ಯೂಟ್ಯೂಬ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮ ಚಾನೆಲ್‌ಗಳಲ್ಲಿ ಅನುಚಿತ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್, ಎಪಿ ಗೃಹ ಸಚಿವ ಅನಿತಾ ಮತ್ತು ಐಟಿ ಸಚಿವ ನಾರಾ ಲೋಕೇಶ್ ಅವರ ಕುರಿತ ನಕಲಿ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಟೀಕೆ ಮಾಡುವ ಮೂಲಕ ನಾಯಕರ ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶ್ರೀರೆಡ್ಡಿ ಮೇಲೆ ದೂರು ನೀಡಿದ್ದಾರೆ..


ಪೊಲೀಸರು ಶ್ರೀ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.. ಬಿಎನ್‌ಎಸ್‌ನ ಸೆಕ್ಷನ್ 352, 353 ಮತ್ತು ಐಟಿ ಆಕ್ಟ್ 2000-2008 ರ ಸೆಕ್ಷನ್ 66 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ಶ್ರೀರೆಡ್ಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.. ಮುಂದೇನಾಗುತ್ತೆ ಅಂತ ಕಾಯ್ದು ನೋಡಬೇಕಿದೆ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.