/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

Ponniyin Selvan 2 collection : 100 ಕೋಟಿ ಕ್ಲಬ್ ಸೇರಿದ ಮಲ್ಟಿ ಸ್ಟಾರ್ ಸಿನಿಮಾ ಪೊನ್ನಿಯನ್ ಸೆಲ್ವನ್ 2

Ponniyin selvan 2 box office collection: ಮಲ್ಟಿ ಸ್ಟಾರ್ ಸಿನಿಮಾ ಪೊನ್ನಿಯನ್ ಸೆಲ್ವನ್-2 ಅದ್ಭುತ ಪ್ರದರ್ಶನ ಕಾಣ್ತಿದೆ. ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಅಲ್ಲದೇ ನೂರು ಕೋಟಿ ಕ್ಲಬ್ ಸೇರಿದೆ.  

Written by - YASHODHA POOJARI | Last Updated : Apr 30, 2023, 03:06 PM IST
  • ಬಾಕ್ಸಾಫೀಸ್‌ನಲ್ಲಿ ಪೊನ್ನಿಯನ್ ಸೆಲ್ವನ್ 2 ಹವಾ
  • 100 ಕೋಟಿ ಕ್ಲಬ್ ಸೇರಿದ ಮಲ್ಟಿ ಸ್ಟಾರ್ ಸಿನಿಮಾ
  • ಅದ್ಭುತ ಪ್ರದರ್ಶನ ಕಾಣ್ತಿದೆ ಪೊನ್ನಿಯನ್ ಸೆಲ್ವನ್-2
Ponniyin Selvan 2 collection : 100 ಕೋಟಿ ಕ್ಲಬ್ ಸೇರಿದ ಮಲ್ಟಿ ಸ್ಟಾರ್ ಸಿನಿಮಾ ಪೊನ್ನಿಯನ್ ಸೆಲ್ವನ್ 2  title=

Ponniyin selvan 2 box office collection: ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದಲ್ಲಿ ಮೂಡಿಬಂದ ಪೊನ್ನಿಯಿನ್ ಸೆಲ್ವನ್-2 ಸಿನಿಮಾ ವಿಶ್ವಾದ್ಯಂತ ಅದ್ಭುತ ಪ್ರದರ್ಶನ ಕಾಣುತ್ತಿದೆ. ಇದೇ ಶುಕ್ರವಾರ ತೆರೆಗೆ ಬಂದ ಈ ಚಿತ್ರಕ್ಕೆ ಪ್ರೇಕ್ಷಕ ಪ್ರಭು ಮೆಚ್ಚುಗೆಯ ಮಹಾಪೂರ ವ್ಯಕ್ತಪಡಿಸುತ್ತಿದ್ದಾರೆ. ಬಾಕ್ಸಾಫೀಸ್ ನಲ್ಲಿ ಬಂಗಾರದ ಬೆಳೆ ತೆಗೆಯುತ್ತಿರುವ ಪಿಎಸ್-2, ರಿಲೀಸ್ ಆದ ಮೂರು ದಿನದಲ್ಲಿಯೇ ನೂರು ಕೋಟಿ ಕಲೆಕ್ಷನ್ ಮಾಡಿದೆ.  ಇಳಯದಳಪತಿ ವಿಜಯ್ ನಟನೆಯ ವಾರಿಸು ಸಿನಿಮಾದ ಕಲೆಕ್ಷನ್ ಬ್ರೇಕ್ ಮಾಡಿರುವ ಪಿಎಸ್-2 ಹೊಸ ದಾಖಲೆ ಬರೆಯುನ್ನು ತನ್ನದಾಗಿಸಿಕೊಳ್ಳುತ್ತಿದೆ.

ಇದನ್ನೂ ಓದಿ: ಬಯಸಿದ ಪ್ರೀತಿಯೂ ಸಿಗದೆ.. ಕುಟುಂದ ಬೆಂಬಲವೂ ಇಲ್ಲದೇ ಕೊರಗಿದ ನಟಿಯ ಕಣ್ಣೀರ ಕತೆ!

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿರುವ ಪೊನ್ನಿಯಿನ್ ಸೆಲ್ವನ್ 2ನಲ್ಲಿ ದೊಡ್ಡ ತಾರಾಬಳಗವೇ ಇದೆ.  ಜಯಂರವಿ, ಚಿಯಾನ್ ವಿಕ್ರಮ್, ಐಶ್ವರ್ಯಾ ರೈ ಬಚ್ಚನ್, ಕಾರ್ತಿ, ತ್ರಿಶಾ, ಶೋಭಿತಾ ಧುಲಿಪಾಲ್​, ಪ್ರಕಾಶ್ ರಾಜ್​ ಸೇರಿದಂತೆ ಹಲವರು ನಟಿಸಿದ್ದಾರೆ. ಕಲ್ಕಿ ಕೃಷ್ಣಮೂರ್ತಿ ಬರೆದಿರೋ ಕಾದಂಬರಿ ಪೊನ್ನಿಯಿನ್‌ ಸೆಲ್ವನ್‌ ಆಧಾರಿಸಿದ ಈ ಕಥೆಗೆ ಮಣಿರತ್ನಂ ಆಕ್ಷನ್ ಕಟ್ ಹೇಳಿದ್ದಾರೆ. 

ಚೋಳ ಸಾಮ್ರಾಜ್ಯದ ಗತವೈಭವ ಸಾರುವ ಈ ಸಿನಿಮಾ ಮೇಕಿಂಗ್, ತಾರಾ ಬಳಗ, ಸಂಗೀತ, ನಟನೆ ಎಲ್ಲದರಲ್ಲಿಯೂ ನೋಡುಗರ ಗಮನಸೆಳೆಯುತ್ತಿದೆ. ಲೈಕಾ ಪ್ರೊಡಕ್ಷನ್ಸ್‌ ಮತ್ತು ಮದ್ರಾಸ್‌ ಟಾಕೀಸ್‌ ಬ್ಯಾನರ್‌ನಡಿ ಈ ಸಿನಿಮಾವನ್ನು ಬಲು ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ಪಾಕ್‌ ಹೆಜ್ಜೆ ಹಿಡಿಲು ಬಿಟ್ಟಿದ್ರೆ ʼಮೊಹಂಜಾದಾರೋʼ ಕಥೆ ಬಿಚ್ಚಿಡುತ್ತಿದ್ದೆ..!

ಕಳೆದ ವರ್ಷ ಸೆಪ್ಟೆಂಬರ್ 30 ರಂದು ರಿಲೀಸ್ ಆಗಿದ್ದ ಪೊನ್ನಿಯನ್ ಸೆಲ್ವನ್ ಮೊದಲ ಭಾಗ ಬರೋಬ್ಬರಿ 500 ಕೋಟಿ ಲೂಟಿ ಮಾಡಿತ್ತು. ಈಗ ತೆರೆಗೆ ಬಂದಿರುವ ಸಿಕ್ವೇಲ್ ಕೂಡ ಅಭೂತಪೂರ್ವ ಯಶಸ್ಸು ಕಾಣುತ್ತಿದ್ದು, ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.