#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

Written by - Yashaswini V | Last Updated : Feb 11, 2022, 12:31 PM IST
  • ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಪ್ಪು ಅಭಿಮಾನಿ ಬಳಗ ಕಾತರದಿಂದ ಕಾಯುತ್ತಿದೆ
  • ಮಾರ್ಚ್ 17ರವರೆಗೆ ಜೇಮ್ಸ್ ಚಿತ್ರ ಬಿಡುಗಡೆಯಾಗಲಿದೆ
  • 'ಜೇಮ್ಸ್' ಚಿತ್ರವನ್ನು ಕನ್ನಡ ಭಾಷೆಯ ಜೊತೆಗೆ ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲೂ ರಿಲೀಸ್ ಮಾಡಲು ಸಿದ್ಧತೆ ನಡೆದಿದೆ
#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್  title=
James Teaser Release

ಬೆಂಗಳೂರು: ದೊಡ್ಮನೆ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದ ಜೇಮ್ಸ್ ಚಿತ್ರದ ಟೀಸರ್ (James Teaser) ಇಂದು ಬಿಡುಗಡೆಯಾಗಿದೆ. ಈಗಾಗಲೇ ಫಸ್ಟ್‌ ಲುಕ್‌ ಮೂಲಕ ಧೂಳೆಬ್ಬಿಸಿದ್ದ ಚಂದನವನದ ಅಪ್ಪು, ಸ್ಯಾಂಡಲ್ ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power Star Puneeth Rajkumar) ಅಭಿನಯದ ಕೊನೆಯ ಸಿನಿಮಾದ ಟೀಸರ್ ಕಂಡು ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. 

ಕನ್ನಡಿಗರು ಮಾತ್ರವಲ್ಲ ಇಡೀ ದೇಶವೇ ಬಹಳ ಕುತೂಹಲದಿಂದ ಕಾಯುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power Star Puneeth Rajkumar) ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಚಿತ್ರದ ಟೀಸರ್ ಬಿಡುಗಡೆ (James Teaser Release) ಮಾಡಲಾಗಿದ್ದು, ಇದರಲ್ಲಿ ಅಪ್ಪು ಹಿಂದೆಂದೂ ಕಂಡಿರದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕಂಡು ಸಂತಸ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳು ಅಪ್ಪು ಇಂದು ನಮ್ಮೊಂದಿಗೆ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಕಂಬನಿ ಮಿಡಿದಿದ್ದಾರೆ.

ನಾಳೆ 'ಜೇಮ್ಸ್' ಎಂಟ್ರಿ ,  ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ..!

ಇದನ್ನೂ ಓದಿ- 'ಬೈಟ್ ಟು ಲವ್' ಇದು ಚಂದನವನದ ಕ್ಯೂಟ್‌ ಲವ್‌ ಸ್ಟೋರಿ..!

ಜೇಮ್ಸ್​ ಟೀಸರ್​ (James Teaser) ನಲ್ಲಿ ಆರಂಭದಿಂದ ಕೊನೆಯವರೆಗೂ ಸಖತ್​ ಆ್ಯಕ್ಷನ್ ದೃಶ್ಯಗಳಿಂದ ಕೂಡಿದೆ. ಟೀಸರ್​ನಲ್ಲಿ ಅಪ್ಪು ಗನ್ ಹಿಡಿದು ಮಿಂಚಿದ್ದರೆ, ಟೀಸರ್ ಕೊನೆಯಲ್ಲಿ ಬರುವ ನನಗೆ ಮೊದಲಿನಿಂದಲೂ ರೆಕಾರ್ಡ್​ ಬ್ರೇಕ್​ ಮಾಡಿ ಅಭ್ಯಾಸ ಎನ್ನುವ ಶಿವಣ್ಣನ ಪಂಚಿಂಗ್ ಡೈಲಾಗ್​ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ.

ಕಿಶೋರ್ ಪತ್ತಿಕೊಂಡ ನಿರ್ಮಾಣ ಮಾಡಿರೋ, ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿರೋ ಜೇಮ್ಸ್ ಚಿತ್ರದಲ್ಲಿ ಅಪ್ಪು ಸೋಲ್ಜರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷತೆ ಎಂದರೆ ಇದರಲ್ಲಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಒಟ್ಟಿಗೆ ನಟಿಸಿರೋ ಮೊದಲ ಸಿನಿಮಾ ಇದಾಗಿದೆ.

ಇದನ್ನೂ ಓದಿ- Love Mocktail-2 : ಮತ್ತೆ ಕಳೆಗಟ್ಟಿದ ಕನ್ನಡ ಚಿತ್ರರಂಗ : ಇದು ಸ್ಯಾಂಡಲ್‌ವುಡ್‌ ಸಂಭ್ರಮ!

ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಪ್ಪು ಅಭಿಮಾನಿ ಬಳಗ ಕಾತರದಿಂದ ಕಾಯುತ್ತಿದೆ. ಮಾರ್ಚ್ 17ರವರೆಗೆ ಜೇಮ್ಸ್ ಚಿತ್ರ ಬಿಡುಗಡೆಯಾಗಲಿದೆ. 'ಜೇಮ್ಸ್' ಚಿತ್ರವನ್ನು ಕನ್ನಡ ಭಾಷೆಯ ಜೊತೆಗೆ ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲೂ ರಿಲೀಸ್ ಮಾಡಲು ಸಿದ್ಧತೆ ನಡೆದಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News