ಪ್ರಭಾಸ್‌ ಫ್ಯಾನ್ಸ್‌ಗೆ ಗುಡ್ ನ್ಯೂಸ್...! 'ಕಲ್ಕಿ 2898 ಎಡಿ' ಅಧಿಕೃತ ರಿಲೀಸ್‌ ಡೇಟ್‌ ಅನೌನ್ಸ್‌ 

Prabhas Kalki 2898 AD : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ ಚಿತ್ರ 'ಕಲ್ಕಿ 2898 AD'. ಸಲಾರ್‌ ನಂತರ ಡಾರ್ಲಿಂಗ್‌ ಅಭಿಮಾನಿಗಳು ಈ ಸಿನಿಮಾಗಾಗಿ ಕಾಯುತ್ತಿದ್ದಾರೆ. ಇದೀಗ, ಈ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

Written by - Krishna N K | Last Updated : Jan 12, 2024, 03:06 PM IST
  • ಪ್ರಭಾಸ್ ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ ಚಿತ್ರ 'ಕಲ್ಕಿ 2898 AD'.
  • ʼಮಹಾನಟಿʼ ಸಿನಿಮಾ ಖ್ಯಾತಿಯ ನಾಗ್ ಅಶ್ವಿನ್ ನಿರ್ದೇಶನ ಕಲ್ಕಿ ಸಿನಿಮಾ.
  • ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ.
ಪ್ರಭಾಸ್‌ ಫ್ಯಾನ್ಸ್‌ಗೆ ಗುಡ್ ನ್ಯೂಸ್...! 'ಕಲ್ಕಿ 2898 ಎಡಿ' ಅಧಿಕೃತ ರಿಲೀಸ್‌ ಡೇಟ್‌ ಅನೌನ್ಸ್‌  title=

Kalki 2898 ad release date : ಸಲಾರ್ ಬ್ಲಾಕ್ ಬಸ್ಟರ್ ಹಿಟ್ ನಂತರ, ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ 'ಕಲ್ಕಿ 2898 ಎಡಿ' ಸಿನಿಮಾ ಮೂಲಕ ತೆರೆಗೆ ಬರಲು ರೆಡಿಯಾಗಿದ್ದಾರೆ. ʼಮಹಾನಟಿʼ ಸಿನಿಮಾ ಖ್ಯಾತಿಯ ನಾಗ್ ಅಶ್ವಿನ್ ನಿರ್ದೇಶನದ ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಹೀರೋಯಿನ್ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ವೈಜ್ಞಾನಿಕ ಕಾಲ್ಪನಿಕ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಮತ್ತು ದಿಶಾ ಪಟಾನಿ ಸೇರಿದಂತೆ ಮುಂತಾದ ಸ್ಟಾರ ನಟರ ದಂಡೆ ಇದೆ.

ಕಳೆದ ಕೆಲವು ದಿನಗಳಿಂದ ಕಲ್ಕಿ 2898 ಎಡಿ ಸಿನಿಮಾ ರಿಲೀಸ್ ಡೇಟ್ ಬಗ್ಗೆ ಸುದ್ದಿಯೊಂದು ವೈರಲ್ ಆಗಿತ್ತು. ಈ ಚಿತ್ರ ಮೇ 09 ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಇದೇ ದಿನಾಂಕವನ್ನು ನಿಗದಿಪಡಿಸುವ ಮೂಲಕ ತಯಾರಕರು ಅಧಿಕೃತ ಘೋಷಣೆ ಮಾಡಿದ್ದಾರೆ. 

ಇದನ್ನೂ ಓದಿ: ಫೆಬ್ರವರಿಯಲ್ಲಿ ತೆರೆಗೆ ಬರಲಿದೆ ʼಪುರುಷೋತ್ತಮನ‌ ಪ್ರಸಂಗʼ

ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಪೋಸ್ಟರ್‌ಗಳು ಮತ್ತು ಗ್ಲಿಂಪ್‌ಗಳು ಪ್ರೇಕ್ಷಕರಲ್ಲಿ ಭಾರೀ ಹೈಪ್ ಕ್ರಿಯೇಟ್ ಮಾಡಿದೆ. ಕಲ್ಕಿ ಟೀಸರ್ ಗೆ ಸೆನ್ಸಾರ್ ಮಂಡಳಿ ಯುಎ ಪ್ರಮಾಣ ಪತ್ರ ನೀಡಿದೆ. ಇದಲ್ಲದೆ, ಟೀಸರ್‌ನ ಉದ್ದ 1 ನಿಮಿಷ 23 ಸೆಕೆಂಡ್‌ ಇದೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಸಿ ಅಶ್ವನಿದತ್ ಈ ಚಿತ್ರವನ್ನು 500 ಕೋಟಿಗೂ ಹೆಚ್ಚು ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. 

ಕಲ್ಕಿ ಚಿತ್ರದ ಟ್ರೈಲರ್ ಅನ್ನು ಏಪ್ರಿಲ್ 1, 2024 ರಂದು ಬಿಡುಗಡೆ ಮಾಡಲಾಗುವುದು ಎಂದು ತಯಾರಕರು ಈಗಾಗಲೇ ತಿಳಿಸಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ಸಂಯೋಜನೆ ಮಾಡಿದ್ದು, ಪ್ರಸಿದ್ಧ OTT ಕಂಪನಿ Netflix ಈ ಚಿತ್ರದ ಡಿಜಿಟಲ್ ಹಕ್ಕುಗಳನ್ನು ಪಡೆದುಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News