Prabhas ProjectK : ಡಾರ್ಲಿಂಗ್‌ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ʼಪ್ರಾಜೆಕ್ಟ್ ಕೆʼ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಚಿತ್ರವು ಜನವರಿ 12, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಸಿನಿಮಾದಲ್ಲಿ ಬಿಟೌನ್‌ ಬೆಡಗಿ ದೀಪಿಕಾ ಪಡುಕೋಣೆ ಡಾರ್ಲಿಂಗ್‌ಗೆ ಜೊತೆಯಾಗಿ ನಟಿಸಿದ್ದಾರೆ. ʼಪ್ರಾಜೆಕ್ಟ್ ಕೆʼ ಅನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ. ಪ್ರಾಜೆಕ್ಟ್ ಕೆ ಪ್ರೇಕ್ಷಕರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ.


COMMERCIAL BREAK
SCROLL TO CONTINUE READING

ಪ್ರಾಜೆಕ್ಟ್ ಕೆ ಅನ್ನು ವೈಜಯಂತಿ ಮೂವೀಸ್ ನಿರ್ಮಿಸಿದೆ. ಪ್ರಾಜೆಕ್ಟ್ ಕೆ ಕೂಡ ಅಮಿತಾಬ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಒಂದು ಟೈಮ್ ಟ್ರಾವೆಲ್ ವಿಷಯಾಧಾರಿತ ಚಿತ್ರ ಅಂತ ಹೇಳಲಾಗಿತ್ತು. ಆದರೆ, ಟೈಮ್ ಟ್ರಾವೆಲರ್ ಸಿನಿಮಾ ಅಲ್ಲ ಅಂತ ಚಿತ್ರದ ಸಂಭಾಷಣೆ ಬರೆದ ಸಾಯಿ ಮಾಧವ್ ಬುರಾ ಹೇಳಿದ್ದರು. ಚಿತ್ರದಲ್ಲಿ ಟೈಮ್ ಮೆಷಿನ್ ಅಥವಾ ಟೈಮ್ ಟ್ರಾವೆಲರ್ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.


Dhruva Sarja : ಧ್ರುವ ಸರ್ಜಾಗಿರೋ ವೃತ್ತಿಪರತೆ ಬಗ್ಗೆ ಕೇಳಿದ್ರೆ ನಿಜಕ್ಕೂ ನೀವು ಶಾಕ್ ಆಗ್ತೀರಾ!


ಪ್ರಾಜೆಕ್ಟ್ ಕೆ ಚಿತ್ರದ ಮೊದಲ ಪೋಸ್ಟರ್ ಅನ್ನು ಪ್ರಭಾಸ್ ಹುಟ್ಟುಹಬ್ಬದಂದು ಬಿಡುಗಡೆ ಮಾಡಲಾಗಿತ್ತು. ಪ್ರಾಜೆಕ್ಟ್ ಕೆ ಮಲ್ಟಿಸ್ಟಾರ್ ಬಿಗ್ ಬಜೆಟ್ ಚಿತ್ರ. ತೆಲುಗು ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶಿಸುತ್ತಿದ್ದಾರೆ. ಪ್ರಾಜೆಕ್ಟ್ ಕೆ ಅನ್ನು ತೆಲುಗಿನ ಪ್ರಮುಖ ನಿರ್ಮಾಣ ಸಂಸ್ಥೆಯಾದ ವಿಜಯಕಾಂತಿ ಮೂವೀಸ್ ಅದ್ಧೂರಿಯಾಗಿ ನಿರ್ಮಾಣಮಾಡಿದೆ. 


ಇದೊಂದು ವೈಜ್ಞಾನಿಕ ಕಾಲ್ಪನಿಕ ಚಿತ್ರವಾಗಲಿದೆ ಎಂದು ಚಿತ್ರದ ನಿರ್ಮಾಪಕರು ಹೇಳಿಕೊಂಡಿದ್ದಾರೆ. ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ನಿರ್ಮಿಸಲಾಗಿರುವ ಆಧುನಿಕ ಸೆಟ್‌ನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಐರನ್ ಮ್ಯಾನ್ ನಂತಹ ತಂತ್ರಜ್ಞಾನ ಆಧಾರಿತ ಸೂಪರ್ ಹೀರೋ ಚಿತ್ರದತ್ತ ಬೊಟ್ಟು ಮಾಡಿದೆ. ಚಿತ್ರದ ಪೋಸ್ಟರ್‌ನಲ್ಲಿರುವ ಪಠ್ಯವೂ ಈ ಊಹೆಗೆ ಬಲವನ್ನು ನೀಡುತ್ತದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.