Salaar release date update : ಸಲಾರ್ ಯಾವಾಗ ಬಿಡುಗಡೆಯಾಗುತ್ತೆ ಅನ್ನೋದು ದೊಡ್ಡ ಪ್ರಶ್ನೆಯಾಗಿದೆ. ಏಕೆಂದರೆ, ಸಲಾರ್ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗುತ್ತಿಲ್ಲ ಎಂಬುದು ನೂರಕ್ಕೆ ನೂರು ಸತ್ಯವಾಗಿದೆ. ವಿದೇಶದಲ್ಲಿ ಸಲಾರ್‌ ಮುಂಗಡ ಟಿಕೆಟ್‌ ಖರೀದಿಸಿದ್ದ ಪ್ರೇಕ್ಷಕರಿಗೆ ಚಿತ್ರತಂಡ ಹಣ ವಾಪಾಸ್‌ ಮಾಡಿದ್ದು, ಚಿತ್ರದ ರಿಲೀಸ್‌ ಡೇಟ್‌ ಮೇಲೆ ಡೌಟ್‌ ಶುರುವಾಗಿದೆ.


COMMERCIAL BREAK
SCROLL TO CONTINUE READING

ಹೌದು.. ಸತತ ಸೋಲು ಅನುಭವಿಸಿದ್ದ ಪ್ರಭಾಸ್‌ಗೆ ಈ ಸಿನಿಮಾ ನಿರ್ಣಾಯಕವಾಗಿದೆ. ಅಲ್ಲದೆ, ಡಾರ್ಲಿಂಗ್‌ ಫ್ಯಾನ್ಸ್‌ ಸಹ ಸಲಾರ್‌ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅದ್ರೆ ಇದುವರೆಗೂ ಚಿತ್ರತಂಡ ಸಿನಿಮಾ ರಿಲೀಸ್‌ ಡೇಟ್‌ ಯಾವುದು ಅಂತ ಪಕ್ಕಾ ಹೇಳಿಲ್ಲ. ಇದರಿಂದಾಗಿ ರೆಬಲ್‌ ಫ್ಯಾನ್ಸ್‌ ಬೇಸರಗೊಂಡಿದ್ದಾರೆ.


ಇದನ್ನೂ ಓದಿ : ಪ್ರವೀಣ್ ತೇಜ್ 'ಜಿಗರ್‌'ಗೆ ಧ್ವನಿಯಾದ ಸಂಚಿತ್ ಹೆಗ್ಡೆ: ರೊಮ್ಯಾಂಟಿಂಕ್ ಹಾಡು ರಿಲೀಸ್


ಇನ್ನು 'ಸಲಾರ್' ರಿಲೀಸ್‌ ದಿನವನ್ನು ಮುಂದೂಡಲಾಗಿದೆ ಎಂದು ಬಲವಾಗಿ ಹೇಳಲು ಆಧಾರವೆಂದರೆ... ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡುತ್ತಿರುವುದು. ಯಸ್‌... ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡುವ ಮೊದಲು ವಿದೇಶಗಳಲ್ಲಿ ಮುಂಗಡ ಟಿಕೆಟ್‌ ಬುಕಿಂಗ್‌ಗಳು ಪ್ರಾರಂಭವಾಗಿದ್ದವು. ಹಲವು ರೆಬೆಲ್ ಸ್ಟಾರ್ ಅಭಿಮಾನಿಗಳು ಟಿಕೆಟ್ ಬುಕ್ ಮಾಡಿದ್ದರು. ಸೆಪ್ಟೆಂಬರ್ 28ಕ್ಕೆ ಸಿನಿಮಾ ಬಿಡುಗಡೆಯಾಗುತ್ತೆ ಅಂತ ಖುಷಿಯಾಗಿದ್ದರು. ಅದ್ರೆ, ಚಿತ್ರತಂಡ ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡಿರುವುದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ.


ರಾಜ್ ಬಿ ಶೆಟ್ಟಿಯಂತೆ ಕುದುರೆ ಏರಿ ಬಂದ ಜೂನಿಯರ್ 'ಟೋಬಿ'....ವಿಡಿಯೋ ವೈರಲ್‌!!


ಕೆಜಿಎಫ್‌ 2 ನಂತರ ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರ 'ಸಾಲಾರ್'. ಇದನ್ನೂ 'ಕೆಜಿಫ್' ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ ಬ್ಯಾನರ್‌ನಲ್ಲಿ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್‌ಗೆ ಜೋಡಿಯಾಗಿ ಶ್ರುತಿ ಹಾಸನ್ ಕಾಣಿಸಿಕೊಂಡಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಶ್ರೀಯಾ ರೆಡ್ಡಿ, ಮಧು ಗುರುಸ್ವಾಮಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಇದೆ, ಭುವನ ಗೌಡ ಛಾಯಾಗ್ರಹಣ ಮತ್ತು ಉಜ್ವಲ್ ಕುಲಕರ್ಣಿ ಸಂಕಲನವಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.