Kalki 2898AD Movie Leaked: ಪ್ರಭಾಸ್ ಕಲ್ಕಿ 2898AD ಸಿನಿಮಾ ಲೀಕ್.. ಈ ಸೈಟ್‌ನಲ್ಲಿ ಸಂಪೂರ್ಣ ಚಿತ್ರ ಲಭ್ಯ!

Kalki 2898AD Movie Leaked: ಕಲ್ಕಿ ಚಿತ್ರ ತಂಡಕ್ಕೆ ಭಾರೀ ಆಘಾತ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪ್ರಭಾಸ್ ಕಲ್ಕಿಯ ಪೂರ್ಣ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.

Written by - Chetana Devarmani | Last Updated : Jul 4, 2024, 07:43 PM IST
    • ಕಲ್ಕಿ ಚಿತ್ರ ತಂಡಕ್ಕೆ ಭಾರೀ ಆಘಾತ
    • ಪ್ರಭಾಸ್ ನಟನೆಯ ಕಲ್ಕಿ 2898AD
    • ಕಲ್ಕಿ 2898AD ಸಿನಿಮಾ ಲೀಕ್
Kalki 2898AD Movie Leaked: ಪ್ರಭಾಸ್ ಕಲ್ಕಿ 2898AD ಸಿನಿಮಾ ಲೀಕ್.. ಈ ಸೈಟ್‌ನಲ್ಲಿ ಸಂಪೂರ್ಣ ಚಿತ್ರ ಲಭ್ಯ! title=

Kalki 2898AD Movie HD Print Leaked Online: ಪ್ರಭಾಸ್ ನಟನೆಯ ಕಲ್ಕಿ ಸಿನಿಮಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಏಕಕಾಲಕ್ಕೆ 600 ಕೋಟಿ ಗಳಿಸಿ 1000 ಕೋಟಿಯತ್ತ ದಾಪುಗಾಳು ಇಡುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ಭಾರತದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 

ಮೊದಲ ಶೋನಿಂದಲೇ ಪಾಸಿಟಿವ್ ಟಾಕ್ ಪಡೆದ ಚಿತ್ರ, ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ಸುರಿಮಳೆಯಾಗುತ್ತಿದೆ. ಸೋಮವಾರ ಮತ್ತು ಮಂಗಳವಾರ ಕೂಡ ಈ ಚಿತ್ರಕ್ಕೆ ಉತ್ತಮ ಗಳಿಕೆ ಸಿಗುತ್ತಿದೆ. ತೆಲುಗು ಪ್ರೇಕ್ಷಕರು ಮಾತ್ರವಲ್ಲದೆ, ಹಿಂದಿ, ತಮಿಳು ಪ್ರೇಕ್ಷಕರು ಕೂಡ ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಸದ್ಯ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಂಚಲನ ಮೂಡಿಸುತ್ತಿದೆ.

ಇದನ್ನೂ ಓದಿ: Sai Pallavi: 10 ವರ್ಷದ ಲವ್! ಬ್ಲಶ್ ಆಗುತ್ತಲೇ ಪ್ರೀತಿಯ ಗುಟ್ಟು ಬಿಟ್ಟುಕೊಟ್ಟ ನಟಿ ಸಾಯಿ ಪಲ್ಲವಿ 

ಇಂತಹ ಸಮಯದಲ್ಲಿ ಈ ಚಿತ್ರತಂಡಕ್ಕೆ ದೊಡ್ಡ ಶಾಕ್ ಸಿಕ್ಕಿದೆ. ರಿಲೀಸ್ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾದ ಎಚ್ ಡಿ ಪ್ರಿಂಟ್ ಆನ್ ಲೈನ್ ನಲ್ಲಿ ಲೀಕ್ ಆಗಿದೆ. ಈ ಸಿನಿಮಾ ಸುಮಾರು 3 ಗಂಟೆಗಳ ರನ್‌ಟೈಮ್‌ನೊಂದಿಗೆ ಬಂದಿದ್ದು, ಇಡೀ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಹಾಕಲಾಗಿದೆ. ಮತ್ತೊಂದು ಅಚ್ಚರಿಯ ವಿಷಯವೆಂದರೆ ಈ ಚಿತ್ರ ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ.

ಮುಂಬರುವ ಯುಗದೊಂದಿಗೆ ಮಹಾಭಾರತವನ್ನು ಸಂಪರ್ಕಿಸುವ, ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ಪ್ರೇಕ್ಷಕರಿಂದ ಮಾತ್ರವಲ್ಲದೆ ವಿಮರ್ಶಕರಿಂದಲೂ ಪ್ರಶಂಸೆ ಗಳಿಸಿದೆ. ಅತ್ಯಂತ ಕಡಿಮೆ ಬಜೆಟ್ ನಲ್ಲಿ ಅದ್ಧೂರಿ ಔಟ್ ಪುಟ್ ನೀಡಿರುವ ನಿರ್ದೇಶಕರನ್ನು ಎಲ್ಲರೂ ಹೊಗಳುತ್ತಿದ್ದಾರೆ.ಇದೀಗ ಈ ಕಲ್ಕಿ ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಇದು ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.  

ಇದನ್ನೂ ಓದಿ: ರಾಕ್ಷಸನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಪ್ರಜ್ವಲ್ ಸಜ್ಜು !

ಪ್ರಭಾಸ್ ಅಭಿನಯದ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ದುಲ್ಕರ್ ಸಲ್ಮಾನ್, ವಿಜಯ್ ದೇವರಕೊಂಡ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಗ್ ಅಶ್ವಿನ್ ಜೊತೆ ಮಹಾನಟಿ ಸಿನಿಮಾ ಮಾಡಿದ್ದ ಕೀರ್ತಿ ಸುರೇಶ್ ಈ ಸಿನಿಮಾದಲ್ಲಿ ಬುಜ್ಜಿ ಪಾತ್ರಕ್ಕೆ ಧ್ವನಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News